Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:23 - ಕನ್ನಡ ಸತ್ಯವೇದವು J.V. (BSI)

23 ತರುವಾಯ ಮಾರಾ ಎಂಬ ಸ್ಥಳವನ್ನು ಸೇರಿದರು; ಆದರೆ ಆ ಸ್ಥಳದ ನೀರು ಕಹಿಯಾಗಿದ್ದದರಿಂದ ಅವರಿಗೆ ಅದನ್ನು ಕುಡಿಯುವದಕ್ಕಾಗದೆ ಹೋಯಿತು. ಅದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತರುವಾಯ ‘ಮಾರಾ’ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರು ಸಿಕ್ಕಿತಾದರೂ ಅದು ಕಹಿಯಾಗಿತ್ತು. ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದ ಆ ಸ್ಥಳಕ್ಕೆ ‘ಮಾರಾ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಬಳಿಕ ಅವರು ಮಾರಾ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರಿತ್ತು. ಆದರೆ ಅವರು ಆ ನೀರನ್ನು ಕುಡಿಯಲಾಗಲಿಲ್ಲ. ಯಾಕೆಂದರೆ ಅದು ಬಹು ಕಹಿಯಾಗಿತ್ತು. (ಆದಕಾರಣವೇ ಆ ಸ್ಥಳಕ್ಕೆ “ಮಾರಾ” ಎಂಬುದಾಗಿ ಹೆಸರು ಕೊಡಲ್ಪಟ್ಟಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಮಾರಾ ಎಂಬಲ್ಲಿಗೆ ಬಂದ ಮೇಲೆ ಅಲ್ಲಿಯ ನೀರನ್ನು ಕುಡಿಯಲಾರದೆ ಇದ್ದರು; ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು “ಮಾರಾ” ಎಂದು ಕರೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:23
2 ತಿಳಿವುಗಳ ಹೋಲಿಕೆ  

ಆಕೆಯು ಅವರಿಗೆ - ನನ್ನನ್ನು ನೊವೊವಿುಯೆಂದು ಕರೆಯಬೇಡಿರಿ; ಸರ್ವಶಕ್ತನು ನನ್ನನ್ನು ಬಹಳವಾಗಿ ದುಃಖಪಡಿಸಿದ್ದಾನೆ. ಆದದರಿಂದ ಮಾರಾ ಎಂದು ಕರೆಯಿರಿ.


ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾವಿುನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು