Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:24 - ಕನ್ನಡ ಸತ್ಯವೇದವು J.V. (BSI)

24 ಜನರು - ನಾವೇನು ಕುಡಿಯಬೇಕೆಂದು ಮೋಶೆಯ ಮೇಲೆ ಗುಣುಗುಟ್ಟುತ್ತಿರಲು ಮೋಶೆಯು ಯೆಹೋವನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಜನರು ಮೋಶೆಗೆ, “ನಾವೇನು ಕುಡಿಯಬೇಕು?” ಎಂದು ಅವನಿಗೆ ವಿರುದ್ಧವಾಗಿ ಗುಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 “ನಾವೇನು ಕುಡಿಯಬೇಕು?” ಎಂದು ಜನರು ಮೋಶೆಯ ಮೇಲೆ ಗೊಣಗುಟ್ಟ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅವರು ಮೋಶೆಗೆ ದೂರು ಹೇಳತೊಡಗಿದರು. “ಈಗ, ನಾವೇನು ಕುಡಿಯೋಣ?” ಎಂದು ಅವರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದ್ದರಿಂದ ಜನರು, “ನಾವು ಏನು ಕುಡಿಯೋಣ?” ಎಂದು ಹೇಳಿ, ಮೋಶೆಗೆ ವಿರೋಧವಾಗಿ ಗೊಣಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:24
19 ತಿಳಿವುಗಳ ಹೋಲಿಕೆ  

ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹವೆಲ್ಲಾ ಮೋಶೆ ಆರೋನರ ಮೇಲೆ ಗುಣುಗುಟ್ಟಿ


ಅವರು ಮೋಶೆಗೆ - ಐಗುಪ್ತದೇಶದಲ್ಲಿ ಸಮಾಧಿಗಳಿಲ್ಲವಾದದರಿಂದ ಅರಣ್ಯದಲ್ಲಿ ಸಾಯಲಿ ಎಂಬದಾಗಿ ನಮ್ಮನ್ನು ಇಲ್ಲಿಗೆ ಕರಕೊಂಡು ಬಂದಿಯೇನು? ಯಾಕೆ ನಮಗೆ ಈ ಪ್ರಕಾರ ಮಾಡಿ ಐಗುಪ್ತದೇಶದಿಂದ ಕರಕೊಂಡು ಬಂದಿ?


ಇವರು ಗುಣುಗುಟ್ಟುವವರೂ ತಮ್ಮ ಗತಿಯನ್ನು ನಿಂದಿಸುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಬರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ.


ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶವಾದರು; ನೀವು ಗುಣುಗುಟ್ಟಬೇಡಿರಿ.


ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ.


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ತರುವಾಯ ಯೆಹೋವನು ಮೋಶೆಗೆ - ಆರೋನನ ಕೋಲನ್ನು ತಿರಿಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು; ಇವರು ಇನ್ನು ಮುಂದೆ ನನಗೆ ವಿರೋಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡಬೇಕು ಎಂದು ಆಜ್ಞಾಪಿಸಿದನು.


ಮರುದಿನ ಇಸ್ರಾಯೇಲ್ಯರ ಸರ್ವಸಮೂಹದವರು ಮೋಶೆ ಆರೋನರ ಮೇಲೆ ಗುಣುಗುಟ್ಟುತ್ತಾ - ನೀವೇ ಯೆಹೋವನ ಜನರನ್ನು ಸಾಯಿಸಿದಿರಿ ಎಂದು ಹೇಳುವವರಾದರು.


ನೀನೂ ನಿನ್ನ ಸಮೂಹದವರೆಲ್ಲರೂ ಯೆಹೋವನಿಗೆ ವಿರೋಧವಾಗಿ ಕೂಡಿಕೊಂಡವರು; ಆರೋನನಿಗೆ ವಿರೋಧವಾಗಿ ಗುಣಗುಟ್ಟುವದೇನು ಎಂದು ಹೇಳಿದನು.


ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು