Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:26 - ಕನ್ನಡ ಸತ್ಯವೇದವು J.V. (BSI)

26 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:26
42 ತಿಳಿವುಗಳ ಹೋಲಿಕೆ  

ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷವಿುಸುವವನೂ ಸಮಸ್ತರೋಗಗಳನ್ನು ವಾಸಿಮಾಡುವವನೂ


ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.


ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು; ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವೆನು;


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ; ಅವರ ಗಾಯಗಳನ್ನು ಕಟ್ಟುತ್ತಾನೆ.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ಅವರು - ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನೀವು ಐಗುಪ್ತ್ಯರಿಗೆ ದಾಸರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದೆನಲ್ಲವೇ.


ಗಾಯಮಾಡುವವನೂ ಗಾಯಕಟ್ಟುವವನೂ ಆತನೇ; ಹೊಡೆಯುವ ಕೈಯೇ ವಾಸಿಮಾಡುತ್ತದೆ.


ನೀವು ಅಂಜಿಕೊಳ್ಳುತ್ತಿದ್ದ ಐಗುಪ್ತದೇಶದ ರೋಗಗಳನ್ನೆಲ್ಲಾ ತಿರಿಗಿ ನಿಮ್ಮ ಮೇಲೆ ಬರಮಾಡುವನು; ಅವು ನಿಮ್ಮನ್ನು ಹತ್ತಿಕೊಂಡೇ ಇರುವವು.


ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು ಅವುಗಳನ್ನು ಅನುಸರಿಸಿ ನಿಮ್ಮ ದೇವರಾದ ಯೆಹೋವನಿಗೆ ಒಳ್ಳೇದೂ ಯುಕ್ತವೂ ಆಗಿರುವದನ್ನು ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವದು.


ಇದಲ್ಲದೆ ಆತನು ನಿನಗೆ - ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ವಿುಲ್ಕೋಮ್ ಇವುಗಳನ್ನು ಆರಾಧಿಸಿದ್ದೂ ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡಿಯದೆ ಹೋದದ್ದೂ ಇದಕ್ಕೆ ಕಾರಣ.


ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡಿಸುತ್ತಾ ಅವರಿಗೆ, ಅವರಲ್ಲಿಯೂ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.


ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಒಬ್ಬನು ಸದ್ಧರ್ಮಿಯಾಗಿ ನೀತಿನ್ಯಾಯಗಳನ್ನು ನಡಿಸಿ


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು.


ನೀವು ನನ್ನ ನಿಯಮಗಳನ್ನು ಕೈಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ


ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಾಯೇಲ್‍ರಾಜ್ಯವು ನಿನ್ನ ಪಾಲಾಗುವದು.


ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ ನಿಮ್ಮ ದೇವರಾದ ಯೆಹೋವನೆಂಬ ಮಹಾಮಹಿಮೆಯುಳ್ಳ ಭಯಂಕರ ನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೆ ಹೋದರೆ


ಅರ್ಧರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಬಂದಿವಾನನ ಚೊಚ್ಚಲು ಮಗನವರೆಗೂ ಐಗುಪ್ತದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರ ಮಾಡಿದನು.


ಹೀಗಿರಲಾಗಿ ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಮಾಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯಜನರಾಗುವಿರಿ; ಸಮಸ್ತ ಭೂವಿುಯೂ ನನ್ನದಷ್ಟೆ.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ನೀವು ಅದನ್ನು ಭುಜಿಸದೆ ಯೆಹೋವನಿಗೆ ಮೆಚ್ಚಿಗೆಯಾಗಿರುವದನ್ನು ನಡಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವದು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.


ಅವರು ತಂದುಕೊಡಲು ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪು ಹಾಕಿ - ಇನ್ನು ಮುಂದೆ ಈ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ಯೆಹೋವನಾದ ನನ್ನ ನುಡಿ ಇದೇ - ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ ಯಾವ ಕೆಲಸವನ್ನೂ ಮಾಡದೆ ಆ ದಿನವನ್ನು ನನ್ನ ದಿನವೆಂದು ಆಚರಿಸಿದರೆ


ಯೆಹೋವನು ಇಂತೆನ್ನುತ್ತಾನೆ - ಇಗೋ, ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರಿ ಎಂದು ಜನರು ಹೇಳಿ ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ ನಿನಗೆ ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.


ಆಗ ಮೋಶೆ ಯೆಹೋವನಿಗೆ - ದೇವಾ, ಆಕೆಯನ್ನು ವಾಸಿಮಾಡಬೇಕೆಂದು ಬೇಡುತ್ತೇನೆ ಎಂದು ಮೊರೆಯಿಟ್ಟನು.


ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಇಸ್ರಾಯೇಲ್ಯರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ನಾನೇ ಎಫ್ರಾಯೀವಿುಗೆ ನಡೆದಾಟವನ್ನು ಕಲಿಸಿದೆನು; ಅದನ್ನು ಕೈಯಲ್ಲಿ ಎತ್ತಿಕೊಂಡೆನು; ತನ್ನನ್ನು ಸ್ವಸ್ಥಮಾಡಿದವನು ನಾನೇ ಎಂದು ಅದಕ್ಕೆ ತಿಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು