Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಯುದ್ಧಶೂರನು; ಆತನ ನಾಮಧೇಯವು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಯುದ್ಧವೀರನು; ಯೆಹೋವ ಎಂಬುದು ಆತನ ನಾಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನು ಯುದ್ಧಶೂರನು ‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ ಯುದ್ಧವೀರನು. ಆತನ ನಾಮಧೇಯವು ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಯುದ್ಧವೀರರು; ಯೆಹೋವ ದೇವರು ಎಂಬುದೇ ಅವರ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:3
14 ತಿಳಿವುಗಳ ಹೋಲಿಕೆ  

ಮಹಾಪ್ರಭಾವವುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ ವಿಶೇಷ ಪರಾಕ್ರವಿುಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.


ಯೆಹೋವನೇ ನಿಮಗಾಗಿ ಯುದ್ಧಮಾಡುವನು; ನೀವಂತು ಸುಮ್ಮನೇ ಇರ್ರಿ ಎಂದು ಹೇಳಿದನು.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಶೂರನೇ ಮಹಿಮಪ್ರಭಾವಗಳನ್ನು ಧರಿಸಿಕೊಂಡು ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.


ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಮೋಶೆ ದೇವರಿಗೆ - ನಾನು ಇಸ್ರಾಯೇಲ್ಯರ ಬಳಿಗೆ ಬಂದು ನಿಮ್ಮ ಪಿತೃಗಳ ದೇವರು ನನ್ನನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳಿದಾಗ ಒಂದು ವೇಳೆ ಅವರು - ಆತನ ಹೆಸರೇನೆಂದು ನನ್ನನ್ನು ಕೇಳಿದರೆ ನಾನೇನು ಉತ್ತರಕೊಡಬೇಕು ಎನ್ನಲು


ಯೆಹೋವನು ಶೂರನಂತೆ ಹೊರಟು ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು; ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.


ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ -


ದೇವರು ಅವನಿಗೆ - ಇರುವಾತನೇ ಆಗಿದ್ದೇನೆ. ನೀನು ಇಸ್ರಾಯೇಲ್ಯರಿಗೆ - ಇರುವಾತನೆಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಬೇಕು.


ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು