ವಿಮೋಚನಕಾಂಡ 15:9 - ಕನ್ನಡ ಸತ್ಯವೇದವು J.V. (BSI)9 ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು, ಅವರಲ್ಲಿ ನಮ್ಮ ಕೋರಿಕೆಯನ್ನು ತೀರಿಸಿಕೊಳ್ಳುವೆವು, ನಾವು ಕತ್ತಿಯನ್ನು ಹಿರಿದು ಭುಜಬಲದಿಂದ ಅವರನ್ನು ಸಂಹಾರ ಮಾಡುವೆವು ಎಂಬದಾಗಿ ನಮ್ಮ ಶತ್ರುಗಳು ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ ಎಂದುಕೊಂಡರು ವೈರಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’ ಅಧ್ಯಾಯವನ್ನು ನೋಡಿ |