Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:1 - ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರ ಸಮೂಹವೆಲ್ಲಾ ಏಲೀವಿುನಿಂದ ಹೊರಟ ಮೇಲೆ ಅವರು ಐಗುಪ್ತದೇಶವನ್ನು ಬಿಟ್ಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀವಿುಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನೆಂಬ ಅರಣ್ಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಅವರು ಏಲೀಮಿನಿಂದ ಪ್ರಯಾಣಮಾಡಿ ಸಿನ್ ಅರಣ್ಯಕ್ಕೆ ಬಂದರು. ಈ ಸ್ಥಳವು ಏಲೀಮಿನ ಮತ್ತು ಸೀನಾಯ್ ಬೆಟ್ಟದ ನಡುವೆ ಇತ್ತು. ಈಜಿಪ್ಟನ್ನು ಬಿಟ್ಟ ನಂತರ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ಈ ಸ್ಥಳಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲರ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣಮಾಡಿ, ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ, ಸೀನಾಯಿ ಪರ್ವತಕ್ಕೂ ಮಧ್ಯೆ ಇರುವ ಸೀನ್ ಮರುಭೂಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:1
7 ತಿಳಿವುಗಳ ಹೋಲಿಕೆ  

ತರುವಾಯ ಇಸ್ರಾಯೇಲ್ಯರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಪ್ರಕಾರ ಸೀನ್ ಎಂಬ ಅರಣ್ಯದಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀವಿುನಲ್ಲಿ ಇಳುಕೊಂಡರು.


ತರುವಾಯ ಅವರು ಏಲೀವಿುಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದದರಿಂದ ಆ ನೀರಿನ ಬಳಿಯಲ್ಲಿ ಇಳುಕೊಂಡರು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೇ ವೇಳೆಯಲ್ಲಿ ಇಸ್ರಾಯೇಲ್ಯರ ಸಮೂಹದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಸೈನ್ಯ ಸೈನ್ಯವಾಗಿ ಐಗುಪ್ತದೇಶದಿಂದ ಹೊರಗೆ ಬರಮಾಡಿದನು.


ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಅರಣ್ಯಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು