Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:12 - ಕನ್ನಡ ಸತ್ಯವೇದವು J.V. (BSI)

12 ಇಸ್ರಾಯೇಲ್ಯರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ - ಸಾಯಂಕಾಲದಲ್ಲಿ ಮಾಂಸವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಯೆಹೋವನೆಂಬದು ನಿಮಗೆ ಗೊತ್ತಾಗುವದೆಂದು ಹೇಳಬೇಕು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಾನು ಇಸ್ರೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತಮಕ್ಕಿಂತ ಮೊದಲು ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯಕ್ಕಿಂತ ಮೊದಲು ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಇಸ್ರಾಯೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತನಾಡಿ, ‘ನೀವು ಸಂಜೆಯಲ್ಲಿ ಮಾಂಸವನ್ನು ತಿನ್ನುವಿರಿ. ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ,’ ಎಂದು ಅವರಿಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:12
17 ತಿಳಿವುಗಳ ಹೋಲಿಕೆ  

ಹೀಗೆ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಯಾಗಿ ನಿಮ್ಮ ದೇವರಾದ ಯೆಹೋವನಾಗಿದ್ದೇನೆ ಎಂದು ನಿಮಗೆ ದೃಢವಾಗುವದು; ಆಗ ಯೆರೂಸಲೇಮು ಪವಿತ್ರವಾಗಿರುವದು; ಮ್ಲೇಚ್ಫರು ಇನ್ನು ಅದನ್ನು ಹಾದುಹೋಗರು.


ಮತ್ತು ಇಸ್ರಾಯೇಲ್ ವಂಶದವರು ನಾನೇ ತಮ್ಮ ದೇವರಾದ ಯೆಹೋವನೆಂದು ಅಂದಿನಿಂದ ಯಾವಾಗಲೂ ತಿಳಿದುಕೊಳ್ಳುವರು.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಆಗ ಅವರು ತಮ್ಮ ದೇವರಾದ ಯೆಹೋವನೆಂಬ ನಾನು ತಮ್ಮೊಂದಿಗಿದ್ದೇನೆಂತಲೂ ಇಸ್ರಾಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂತಲೂ ನಿಶ್ಚಯಿಸಿಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.


ಆ ಸಕಲ ಪಟ್ಟಣಗಳವರು, ವ್ಯವಸಾಯಗಾರರು, ಮಂದೆ ಮೇಯಿಸುತ್ತಾ ದೇಶದಲ್ಲಿ ಸಂಚರಿಸುವವರು, ಅಂತು ಯೆಹೂದ್ಯರೆಲ್ಲರೂ ಅಲ್ಲಿ ಒಟ್ಟಿಗೆ ವಾಸಿಸುವರು.


ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು.


ಆಗ ಯೆಹೋವನು ಅವನಿಗೆ - ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನಿನಗೆ ಕಾಣಿಸಿದ್ದು ನಿಜ ಎಂಬದನ್ನು ನಂಬುವರು ಎಂದು ಹೇಳಿದನು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೇ ವೇಳೆಯಲ್ಲಿ ಇಸ್ರಾಯೇಲ್ಯರ ಸಮೂಹದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.


ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ -


ಯಾಕಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ಆಗ ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಯೆಹೋವನು ಹೀಗನ್ನುತ್ತಾನೆ - ಯೆಹೋವನು ತಗ್ಗುಗಳ ದೇವರಲ್ಲ, ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವದು ಎಂದು ಹೇಳಿದನು.


ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯಾಹಾರದಿಂದ ಅವರನ್ನು ತೃಪ್ತಿಗೊಳಿಸಿದನು.


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು;


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಹೆಚ್ಚು ಹರಟೆಗಳನ್ನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು