Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:15 - ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ಇದೇನಿರಬಹುದು ಎಂದು ಹೇಳಿಕೊಂಡರು. ಮೋಶೆ ಅವರಿಗೆ - ಇದು ಯೆಹೋವನು ನಿಮಗೋಸ್ಕರ ಕೊಟ್ಟ ಆಹಾರವು; ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ‘ಮನ್ನ’ ಎಂದರು. ಇದೇನಿರಬಹುದೆಂದು ವಿಚಾರಿಸಿದರು ಮೋಶೆ ಅವರಿಗೆ, “ಇದು ಸರ್ವೇಶ್ವರ ಸ್ವಾಮಿ ನಿಮಗೋಸ್ಕರ ಕೊಟ್ಟ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲರು ಅದನ್ನು ನೋಡಿದಾಗ ಅವರು, ಒಬ್ಬರಿಗೊಬ್ಬರು, “ಇದೇನು?” ಎಂದರು. ಏಕೆಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ, “ಯೆಹೋವ ದೇವರು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:15
19 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೋಶೆಗೆ - ಇಗೋ ನಾನು ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವೂ ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಇವರು ನನ್ನ ಬೋಧನೆಯನ್ನು ಅನುಸರಿಸಿ ನಡೆಯುವವರೋ ಅಲ್ಲವೋ ಎಂದು ಪರೀಕ್ಷಿಸಿ ತಿಳಿಯುತ್ತೇನೆ.


ಪರಲೋಕದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಹಿರಿಯರು ಮನ್ನಾ ತಿಂದರೂ ಸತ್ತರು; ಇದು ಹಾಗಲ್ಲ; ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು ಎಂದು ಹೇಳಿದನು.


ಇಸ್ರಾಯೇಲ್ಯರು ಆ ಆಹಾರಕ್ಕೆ ಮನ್ನ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಕಲಸಿದ ದೋಸೆಗಳ ಹಾಗಿತ್ತು.


ಮನುಷ್ಯರು ಆಹಾರಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾರೆಂಬದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಹಸಿವೆಯಿಂದ ಬಳಲಿಸಿ ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಅವರೆಲ್ಲರೂ ದೈವಿಕವಾದ ಒಂದೇ ಆಹಾರವನ್ನು ತಿಂದರು;


ಅವರಿಗೆ ಉಪದೇಶಿಸಲು ನಿನ್ನ ಒಳ್ಳೇ ಆತ್ಮನನ್ನು ಕೊಟ್ಟಿ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ.


ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದಿ.


ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿವಸವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರಿಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಉತ್ಪನ್ನವನ್ನು ಅನುಭವಿಸುತ್ತಿದ್ದರು.


ನಿಮ್ಮ ಹಿರಿಯರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತುಹೋದರು;


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ಆದಕಾರಣ ಮೋಶೆಯು ಆರೋನನಿಗೆ - ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಒಂದು ಗೋಮೆರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವದಕ್ಕೋಸ್ಕರ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡು ಎಂದು ಹೇಳಿದನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ಇವೆಲ್ಲವುಗಳ ಮೇಲೆ ಇಹಲೋಕದ ಜನಗಳು ತವಕಪಡುತ್ತಾರೆ; ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.


ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ ಉಣ್ಣಲಿಕ್ಕೆ ಕೊಟ್ಟನು.


ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯಾಹಾರದಿಂದ ಅವರನ್ನು ತೃಪ್ತಿಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು