Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:22 - ಕನ್ನಡ ಸತ್ಯವೇದವು J.V. (BSI)

22 ಆರನೆಯ ದಿನ ಕೂಡಿಸಿಕೊಳ್ಳುವಲ್ಲಿ ಎರಡರಷ್ಟು ಆಹಾರವು ಅಂದರೆ ಒಬ್ಬೊಬ್ಬನಿಗೆ ಎರಡೆರಡು ಗೋಮೆರಿನ ಮೇರೆಗೆ ದೊರೆತದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆರನೆಯ ದಿನ ಎರಡಷ್ಟು ಆಹಾರವನ್ನು ಅಂದರೆ ಒಬ್ಬೊಬ್ಬನಿಗೆ ಎರಡೆರಡು ಹೋಮೆರಿನ ಮೇರೆಗೆ ಕೂಡಿಸಿಕೊಂಡರು. ಆದ್ದರಿಂದ ಸಮಾಜದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆರನೆಯ ದಿನವಾದ ಶುಕ್ರವಾರದಲ್ಲಿ ಜನರು ಎರಡರಷ್ಟನ್ನು ಕೂಡಿಸಿಕೊಂಡರು. ಅವರು ಪ್ರತಿಯೊಬ್ಬನಿಗೆ ಆರು ಸೇರಿನಷ್ಟು ಕೂಡಿಸಿಕೊಂಡರು. ಆದ್ದರಿಂದ ಜನನಾಯಕರೆಲ್ಲರೂ ಬಂದು ಮೋಶೆಗೆ ಇದನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆರನೆಯ ದಿನದಲ್ಲಿ ಅವರು ಎರಡರಷ್ಟು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:22
6 ತಿಳಿವುಗಳ ಹೋಲಿಕೆ  

ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಪಡಿಸಿಕೊಳ್ಳುವಾಗ ಅದು ಪ್ರತಿದಿನ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವದು ಎಂದು ಹೇಳಿದನು.


ನೀವು ಎಂಟನೆಯ ವರುಷದಲ್ಲಿ ಬೀಜವನ್ನು ಬಿತ್ತಿ ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರುಷದವರೆಗೆ ಹಿಂದಿನ ಬೆಳೆಯಿಂದಲೇ ಜೀವನಮಾಡುವಿರಿ.


ಅದು ಜೂಬಿಲಿ ವರುಷವಾದದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬಹುದು.


ಆದರೆ ಮೋಶೆ ಅವರನ್ನು ಕರೆಯಲು ಆರೋನನೂ ಸಮೂಹದ ಅಧಿಪತಿಗಳೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತಾಡಿದನು.


ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಒಂದು ಗೋಮೆರಿನ ಮೇರೆಗೆ ತನ್ನ ಡೇರೆಯವರಿಗೋಸ್ಕರ ಕೂಡಿಸಿಕೊಳ್ಳಲಿ; ಒಬ್ಬೊಬ್ಬನು ಅಷ್ಟೇ ಸರಾಸರಿಯಾಗಿ ತಿನ್ನುವದುಂಟಲ್ಲವೇ ಎಂದು ಹೇಳಿದನು.


ಜನರು ದಿನದಿನಕ್ಕೆ ಹೊತ್ತಾರೆಯಲ್ಲಿ ತಮ್ಮತಮ್ಮ ಭೋಜನಕ್ಕೆ ತಕ್ಕಷ್ಟು ಕೂಡಿಸಿಕೊಂಡರು. ಬಿಸಿಲು ಹೆಚ್ಚಿದಾಗ ಅದು ಕರಗಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು