Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:25 - ಕನ್ನಡ ಸತ್ಯವೇದವು J.V. (BSI)

25 ಆಗ ಮೋಶೆ ಅವರಿಗೆ - ಈ ಹೊತ್ತು ಅದನ್ನು ಊಟ ಮಾಡಿರಿ; ಈ ದಿನವು ಯೆಹೋವನ ಸಬ್ಬತ್ ದಿನವಾದದರಿಂದ ಈ ಹೊತ್ತು ಅದು ಅಡವಿಯಲ್ಲಿ ದೊರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೋಶೆ ಅವರಿಗೆ, “ಈ ದಿನ ಅದನ್ನು ಊಟಮಾಡಿ. ಇದು ಸರ್ವೇಶ್ವರನ ಸಬ್ಬತ್ ದಿನವಾದ್ದರಿಂದ ಈ ದಿನ ಅದು ಅಡವಿಯಲ್ಲಿ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಶನಿವಾರದಲ್ಲಿ ಮೋಶೆಯು ಜನರಿಗೆ, “ಈ ದಿನ ಸಬ್ಬತ್ತಾಗಿದೆ. ಇದು ಯೆಹೋವನನ್ನು ಸನ್ಮಾನಿಸುವುದಕ್ಕಿರುವ ವಿಶೇಷವಾದ ವಿಶ್ರಾಂತಿ ದಿನವಾಗಿದೆ. ನೀವು ನಿನ್ನೆಯಿಂದ ಇಟ್ಟುಕೊಂಡಿದ್ದ ಆಹಾರವನ್ನು ಊಟಮಾಡಿರಿ. ಇಂದು ನೀವು ಹೊಲದಲ್ಲಿ ಯಾವ ಆಹಾರವನ್ನೂ ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಮೋಶೆಯು, “ಈ ಹೊತ್ತು ಅದನ್ನು ಊಟಮಾಡಿರಿ. ಏಕೆಂದರೆ ಈ ದಿನವು ಯೆಹೋವ ದೇವರ ಸಬ್ಬತ್ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ ಆಹಾರ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:25
5 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು - ಇದು ಯೆಹೋವನು ಹೇಳಿದ ಮಾತು; ನಾಳೆ ವಿರಾಮಮಾಡಿಕೊಳ್ಳತಕ್ಕ ಯೆಹೋವನ ಪರಿಶುದ್ಧ ಸಬ್ಬತ್ ದಿನವಾಗಿದೆ. [ಈ ಹೊತ್ತಿಗೆ] ಸುಡಬೇಕಾದದ್ದನ್ನು ಸುಟ್ಟು ಬೇಯಿಸಬೇಕಾದದ್ದನ್ನು ಬೇಯಿಸಿದ ನಂತರ ವಿುಕ್ಕದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿರಿ ಅಂದನು.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ.


ನೋಡಿರಿ, ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಾನು ಅಪ್ಪಣೆ ಮಾಡಿರುವದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು; ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು ಎಂದು ಹೇಳಿದನು.


ಮೋಶೆ ಆಜ್ಞಾಪಿಸಿದಂತೆ ಅವರು ಮರುದಿನದ ತನಕ ಅದನ್ನು ಇಟ್ಟುಕೊಂಡರು; ಅದು ನಾರಲಿಲ್ಲ, ಹುಳವೂ ಬೀಳಲಿಲ್ಲ.


ಆರು ದಿವಸ ಅದನ್ನು ಕೂಡಿಸಬಹುದು; ಏಳನೆಯ ದಿನ ಸಬ್ಬತಾದದರಿಂದ ಅದು ದೊರೆಯುವದೇ ಇಲ್ಲ ಎಂದು ಹೇಳಿದನು. ಹಾಗೆಯೇ ಆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು