Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:29 - ಕನ್ನಡ ಸತ್ಯವೇದವು J.V. (BSI)

29 ನೋಡಿರಿ, ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂದು ನಾನು ಅಪ್ಪಣೆ ಮಾಡಿರುವದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು; ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನೋಡಿ, ಸಬ್ಬತ್ ದಿನವನ್ನು ನೀವು ಆಚರಿಸಬೇಕೆಂದು ಸರ್ವೇಶ್ವರನಾದ ನಾನು ಅಪ್ಪಣೆ ಮಾಡಿರುವುದರಿಂದಲೇ ಆರನೆಯ ದಿನ ಎರಡು ದಿನದ ಆಹಾರ ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು,’ ಎಂದು ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತುಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವಲ್ಲೇ ಇರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:29
9 ತಿಳಿವುಗಳ ಹೋಲಿಕೆ  

ಇದಲ್ಲದೆ ತಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳುಕೊಳ್ಳುವಂತೆ ನನಗೂ ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ನೇವಿುಸಿದೆನು.


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧತೈಲವನ್ನೂ ಸಿದ್ಧಮಾಡಿಕೊಂಡರು.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ.


ಆಗ ಯೆಹೋವನು ಮೋಶೆಗೆ - ನೀವು ಎಲ್ಲಿಯವರೆಗೂ ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರೋ;


ಆದದರಿಂದ ಏಳನೆಯ ದಿನದಲ್ಲಿ ಜನರು ಕೆಲಸವನ್ನು ಮಾಡದೆ ಇದ್ದರು.


ಆರನೆಯ ವರುಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರುಷಗಳ ಬೆಳೆಯಷ್ಟಾಗುವದು.


ಆಗ ಮಹಾಸಂಕಟ ಉಂಟಾಗುವದರಿಂದ ನಿಮ್ಮ ಪಲಾಯನವು ಚಳಿಗಾಲದಲ್ಲಿಯಾಗಲಿ ಸಬ್ಬತ್‍ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥನೆಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು