Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:3 - ಕನ್ನಡ ಸತ್ಯವೇದವು J.V. (BSI)

3 ಅವರಿಗೆ - ಈ ಸಮೂಹವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ನೀವು ಈ ಅರಣ್ಯದೊಳಕ್ಕೆ ನಮ್ಮನ್ನು ಕರಕೊಂಡು ಬಂದಿರಷ್ಟೆ. ನಾವು ಐಗುಪ್ತದೇಶದಲ್ಲಿದ್ದಾಗ ಯೆಹೋವನ ಕೈಯಿಂದ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಆಗ ಮಾಂಸಪಾತ್ರೆಗಳ ಬಳಿಯಲ್ಲಿ ಕೂತು ಹೊಟ್ಟೇತುಂಬ ಊಟಮಾಡುತ್ತಿದ್ದೆವಲ್ಲಾ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಸಾಕಾಗುವಷ್ಟು ರೊಟ್ಟಿಯನ್ನು ತಿನ್ನುತ್ತಿದ್ದಾಗ, ಯೆಹೋವ ದೇವರ ಕೈಯಿಂದ ಸತ್ತು ಹೋಗಿದ್ದರೆ ಒಳ್ಳೆಯದಾಗಿತ್ತು. ಇಡೀ ಜನಾಂಗವೇ ಹಸಿವೆಯಿಂದ ಸತ್ತು ಹೋಗುವಂತೆ ನಮ್ಮನ್ನು ಈ ಮರುಭೂಮಿಗೆ ಬರಮಾಡಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:3
32 ತಿಳಿವುಗಳ ಹೋಲಿಕೆ  

ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು; ಭೂಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ಮನಸ್ಸಿನಲ್ಲಿ ಯಾವಾಗಲೂ ಪ್ರಾಣಭಯವಿರುವದರಿಂದಲೂ ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವದರಿಂದಲೂ ನೀವು ಹೊತ್ತಾರೆಯಲ್ಲಿ - ಅಯ್ಯೋ, ಅಯ್ಯೋ! ಸಾಯಂಕಾಲ ಯಾವಾಗ ಬರುವದೋ ಎಂದೂ ಸಾಯಂಕಾಲದಲ್ಲಿ - ಅಯ್ಯೋ, ಅಯ್ಯೋ! ಮರುದಿನ ಯಾವಾಗ ಬರುವದೋ ಎಂದೂ ಹೇಳುವಿರಿ.


ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.


ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಮ್ಮ ಸಹಾಯವಿಲ್ಲದೆ ಅರಸರಾದಿರಿ. ನೀವು ನಿಜವಾಗಿ ಅರಸರಾಗಿದ್ದರೆ ನನಗೆ ಎಷ್ಟೋ ಆನಂದವಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಅರಸರಾಗಿರುತ್ತಿದ್ದೆವು.


ಮತ್ತು ಯೆಹೋಶುವನು - ಅಯ್ಯೋ ಕರ್ತನೇ, ಯೆಹೋವನೇ, ನೀನು ಈ ಜನರನ್ನು ಯೊರ್ದನ್ ಹೊಳೆ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡಬೇಕೆಂದಿದ್ದೀಯಾ? ನಾವು ಇಷ್ಟೇ ಸಾಕೆಂದು ಯೊರ್ದನ್ ಹೊಳೆಯ ಆಚೆಯಲ್ಲಿಯೇ ಇದ್ದರೆ ಎಷ್ಟೋ ಒಳ್ಳೇದಾಗಿತ್ತು.


ನಾನು ನನ್ನನ್ನು ಹೊಗಳಿಕೊಳ್ಳುವದರಲ್ಲಿ ಸ್ವಲ್ಪ ಬುದ್ಧಿಹೀನತೆಯಿಂದ ಮಾತಾಡುತ್ತೇನೆ; ನೀವು ಅದನ್ನು ಸಹಿಸಿಕೊಳ್ಳುತ್ತೀರೇನೋ. ನನ್ನನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು.


ಕಷ್ಟದಲ್ಲಿರುವವನಿಗೆ ಬೆಳಕನ್ನು ಮನನೊಂದವರಿಗೆ ಜೀವವನ್ನು ಕೊಡುವದೇಕೆ?


ಆ ರಾತ್ರಿಯು ನನ್ನ ತಾಯಿಯ ಗರ್ಭ ದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆ ಮಾಡಲಿಲ್ಲವಲ್ಲಾ.


ಆಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮದಿವಸವನ್ನು ಶಪಿಸಿ ಇಂತೆಂದನು -


ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು.


ಮನುಷ್ಯರು ಆಹಾರಮಾತ್ರದಿಂದಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾರೆಂಬದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಹಸಿವೆಯಿಂದ ಬಳಲಿಸಿ ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಮರುದಿನ ಇಸ್ರಾಯೇಲ್ಯರ ಸರ್ವಸಮೂಹದವರು ಮೋಶೆ ಆರೋನರ ಮೇಲೆ ಗುಣುಗುಟ್ಟುತ್ತಾ - ನೀವೇ ಯೆಹೋವನ ಜನರನ್ನು ಸಾಯಿಸಿದಿರಿ ಎಂದು ಹೇಳುವವರಾದರು.


ನಾವು ಬರುವದಿಲ್ಲ, ನೀನು ಹಾಲೂ ಜೇನೂಹರಿಯವ ದೇಶದಿಂದ ನಮ್ಮನ್ನು ಕರಕೊಂಡು ಬಂದು ಮರಳುಕಾಡಿನಲ್ಲಿ ಸಾಯಿಸುವದು ಅಲ್ಪಕಾರ್ಯವೆಂದು ಎಣಿಸಿ ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತೀಯೋ?


ನೀನು ಹೀಗೆ ಮಾಡುವದಕ್ಕಿಂತಲೂ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರ; ನನಗಾಗುವ ದುರವಸ್ಥೆಯನ್ನು ನಾನು ನೋಡಲಾರೆನು ಅಂದನು.


ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.


ಈ ಮೇರೆಗೆ ಬಹಳ ದಿನಗಳು ಕಳೆದ ಮೇಲೆ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲ್ಯರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸುರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವದಕ್ಕೆ ಈ ದೇಶಕ್ಕೆ ಬರಮಾಡುತ್ತಾನೆ; ನಮ್ಮ ಹೆಂಡರೂ ಮಕ್ಕಳೂ ಪರರ ಪಾಲಾಗುವರಲ್ಲಾ; ನಾವು ಐಗುಪ್ತದೇಶಕ್ಕೆ ತಿರಿಗಿ ಹೋಗುವದು ಒಳ್ಳೇದಲ್ಲವೇ ಎಂದು ಹೇಳಿಕೊಳ್ಳುತ್ತಾ ಒಬ್ಬರ ಸಂಗಡಲೊಬ್ಬರು -


ಅವರು ಆತನಿಗೆ ವಿರೋಧವಾಗಿ ಅಂದದ್ದೇನಂದರೆ - ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?


ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಭುಜಿಸಿದನು. ಆತನು ಅವರಿಗೆ ತೃಪ್ತಿಭೋಜನವನ್ನು ಕೊಟ್ಟನು.


ನಾವು ಯುದ್ಧಕಾಣದೆ ತುತೂರಿಯ ಶಬ್ದಕೇಳದೆ ಅನ್ನದ ಕೊರತೆಯಿಂದ ಹಸಿವೆಗೊಳ್ಳದೆ ಇರುವ ಐಗುಪ್ತದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು ಎಂದುಕೊಂಡರೆ


ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು, ಸುರಿಯುವೆವು ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇವಿುನ ಬೀದಿಗಳಲ್ಲಿ ನಾವೂ ನಮ್ಮ ಪಿತೃಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.


ಅವರು ಮೋಶೆಗೆ - ಐಗುಪ್ತದೇಶದಲ್ಲಿ ಸಮಾಧಿಗಳಿಲ್ಲವಾದದರಿಂದ ಅರಣ್ಯದಲ್ಲಿ ಸಾಯಲಿ ಎಂಬದಾಗಿ ನಮ್ಮನ್ನು ಇಲ್ಲಿಗೆ ಕರಕೊಂಡು ಬಂದಿಯೇನು? ಯಾಕೆ ನಮಗೆ ಈ ಪ್ರಕಾರ ಮಾಡಿ ಐಗುಪ್ತದೇಶದಿಂದ ಕರಕೊಂಡು ಬಂದಿ?


ಪೂರಾ ಒಂದು ತಿಂಗಳು ಮಾಂಸವನ್ನು ಊಟಮಾಡುವಿರಿ. ಅದು ಓಕರಿಕೆಯಾಗಿ ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ಊಟಮಾಡುವಿರಿ ಅಂದನು.


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ಹಸಿವೆನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು