ವಿಮೋಚನಕಾಂಡ 16:32 - ಕನ್ನಡ ಸತ್ಯವೇದವು J.V. (BSI)32 ಮೋಶೆಯು ಜನರಿಗೆ - ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ - ನಾನು ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಅರಣ್ಯದಲ್ಲಿ ತಿನ್ನುವದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ನೀವು ಒಂದು ಗೋಮೆರ್ ತುಂಬಾ ಮನ್ನವನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಮೋಶೆ ಜನರಿಗೆ, “ಸರ್ವೇಶ್ವರ ಸ್ವಾಮಿ ಇದರ ವಿಷಯದಲ್ಲಿ ಕೊಟ್ಟ ಆಜ್ಞೆ ಇದು: ‘ನೀವು ಒಂದು ಹೋಮೆರ್ ತುಂಬ ಮನ್ನವನ್ನು ಇಟ್ಟುಕೊಳ್ಳಬೇಕು. ಏಕೆಂದರೆ ನಾನು ಈಜಿಪ್ಟಿನಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಈ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ಇದನ್ನು ಇಟ್ಟುಕೊಳ್ಳಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಮೋಶೆಯು ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ: ‘ನಾನು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಡಿಸಿದಾಗ, ಮರುಭೂಮಿಯಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ್ ಮನ್ನವನ್ನು ತುಂಬಿಸಿ ಇಟ್ಟಿರಬೇಕು,’ ಎಂಬುದು,” ಎಂದನು. ಅಧ್ಯಾಯವನ್ನು ನೋಡಿ |