Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:33 - ಕನ್ನಡ ಸತ್ಯವೇದವು J.V. (BSI)

33 ಆದಕಾರಣ ಮೋಶೆಯು ಆರೋನನಿಗೆ - ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಒಂದು ಗೋಮೆರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವದಕ್ಕೋಸ್ಕರ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದಕಾರಣ ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿಡು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದ್ದರಿಂದ ಮೋಶೆಯು ಆರೋನನಿಗೆ, “ಒಂದು ಭರಣಿಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ತುಂಬಿಸು. ನಿಮ್ಮ ಮುಂದಿನ ಸಂತತಿಯವರು ನೋಡುವುದಕೋಸ್ಕರ ಇದನ್ನು ಉಳಿಸಿ ಯೆಹೋವನ ಮುಂದೆ ಇಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಯೆಹೋವ ದೇವರ ಮುಂದೆ ಇಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:33
3 ತಿಳಿವುಗಳ ಹೋಲಿಕೆ  

ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದ ತಗಡನ್ನು ಮಡಾಯಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆ ಬರೆದಿದ್ದ ಕಲ್ಲಿನ ಹಲಿಗೆಗಳೂ ಇದ್ದವು;


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ಮೋಶೆಯು ಜನರಿಗೆ - ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ - ನಾನು ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಅರಣ್ಯದಲ್ಲಿ ತಿನ್ನುವದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ನೀವು ಒಂದು ಗೋಮೆರ್ ತುಂಬಾ ಮನ್ನವನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು