Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:10 - ಕನ್ನಡ ಸತ್ಯವೇದವು J.V. (BSI)

10 ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟನು; ಮೋಶೆಯೂ ಆರೋನನೂ ಹೂರನೂ ಈ ಮೂವರು ಗುಡ್ಡದ ತುದಿಗೆ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡಲು ಹೊರಟನು. ಮೋಶೆ, ಆರೋನ ಹಾಗು ಹೂರ ಈ ಮೂವರು ಗುಡ್ಡದ ತುದಿಗೆ ಏರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋಶುವನು ಮೋಶೆಯ ಮಾತಿಗೆ ವಿಧೇಯನಾಗಿ ಮರುದಿನ ಅಮಾಲೇಕ್ಯರೊಡನೆ ಯುದ್ಧಮಾಡಲು ಹೋದನು. ಅದೇ ಸಮಯದಲ್ಲಿ ಮೋಶೆಯೂ ಆರೋನನೂ ಹೂರನೂ ಬೆಟ್ಟದ ತುದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋಶುವನು ಮೋಶೆ ಅಪ್ಪಣೆ ಕೊಟ್ಟಂತೆ ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:10
9 ತಿಳಿವುಗಳ ಹೋಲಿಕೆ  

ಮೊದಲು ಅವನು ಹಿರಿಯರಿಗೆ - ನಾವು ತಿರಿಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರ್ರಿ; ಆರೋನನೂ ಹೂರನೂ ನಿಮ್ಮ ಬಳಿಯಲ್ಲಿದ್ದಾರಷ್ಟೆ; ಯಾವನಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ ಎಂದು ಹೇಳಿದನು.


ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು; ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಅವನು ಒಂದನ್ನೂ ಮೀರಲಿಲ್ಲ.


ವಿಚಿತ್ರವಾಗಿ ನಯವಾದ ಕೆಲಸಗಳನ್ನು ಕಲ್ಪಿಸುವದಕ್ಕೂ ಚಿನ್ನ ಬೆಳ್ಳಿ ತಾಮ್ರಗಳಿಂದ ಕೆಲಸ ನಡಿಸುವದಕ್ಕೂ


ಹೀಗಿರಲು ಮೋಶೆಯ ಕೈಗಳು ಭಾರವಾದದರಿಂದ ಆರೋನ ಹೂರರು ಒಂದು ಕಲ್ಲನ್ನು ತಂದಿಟ್ಟು ಅದರ ಮೇಲೆ ಅವನನ್ನು ಕೂಡ್ರಿಸಿ ಬಲಗಡೆ ಒಬ್ಬನು ಎಡಗಡೆ ಒಬ್ಬನು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಲ್ಲಿ ಅವನ ಕೈಗಳು ಹೊತ್ತು ಮುಣುಗುವ ತನಕ ಇಳಿಯದೆ ನಿಂತೇ ಇದ್ದವು.


ನಾನು ನಿಮಗೆ ಕೊಟ್ಟ ಆಜ್ಞೆಗಳಿಗೆ ಸರಿಯಾಗಿ ನೀವು ನಡೆದರೆ ನೀವು ನನ್ನ ಸ್ನೇಹಿತರು.


ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗ ಇಸ್ರಾಯೇಲ್ಯರು ಬಲವಾಗುವರು; ಇಳಿಸುವಾಗ ಅಮಾಲೇಕ್ಯರು ಬಲವಾಗುವರು.


ಅಜೂಬಳು ಸತ್ತ ಮೇಲೆ ಅವನು ಎಫ್ರಾತಳನ್ನು ತೆಗೆದುಕೊಂಡನು. ಆಕೆಯಲ್ಲಿ ಅವನಿಗೆ ಹೂರನು ಹುಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು