Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:12 - ಕನ್ನಡ ಸತ್ಯವೇದವು J.V. (BSI)

12 ಹೀಗಿರಲು ಮೋಶೆಯ ಕೈಗಳು ಭಾರವಾದದರಿಂದ ಆರೋನ ಹೂರರು ಒಂದು ಕಲ್ಲನ್ನು ತಂದಿಟ್ಟು ಅದರ ಮೇಲೆ ಅವನನ್ನು ಕೂಡ್ರಿಸಿ ಬಲಗಡೆ ಒಬ್ಬನು ಎಡಗಡೆ ಒಬ್ಬನು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಲ್ಲಿ ಅವನ ಕೈಗಳು ಹೊತ್ತು ಮುಣುಗುವ ತನಕ ಇಳಿಯದೆ ನಿಂತೇ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗಿರಲು ಮೋಶೆಯ ಕೈಗಳು ಆಯಾಸಗೊಳ್ಳುತ್ತಿದ್ದುದರಿಂದ ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದಿಟ್ಟು ಅದರ ಮೇಲೆ ಮೋಶೆಯನ್ನು ಕುಳ್ಳಿರಿಸಿದರು. ಅಲ್ಲದೆ ಬಲಗಡೆ ಒಬ್ಬನು ಎಡಗಡೆ ಒಬ್ಬನು ನಿಂತು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಾಗಿ ಅವನ ಕೈಗಳು ಹೊತ್ತು ಮುಳುಗುವ ತನಕ ಇಳಿಯದೆ ನಿಂತೇ ಇರುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸ್ವಲ್ಪ ಸಮಯದ ನಂತರ ಮೋಶೆಯ ತೋಳುಗಳು ಆಯಾಸಗೊಂಡವು. ಆದ್ದರಿಂದ ಅವರು ಒಂದು ದೊಡ್ಡಕಲ್ಲನ್ನು ಇಟ್ಟು ಮೋಶೆಯನ್ನು ಅದರ ಮೇಲೆ ಕುಳ್ಳಿರಿಸಿದರು. ಬಳಿಕ ಆರೋನನು ಮತ್ತು ಹೂರನು ಮೋಶೆಯ ಕೈಗಳನ್ನು ಮೇಲೆತ್ತಿ ಹಿಡಿದುಕೊಂಡರು. ಆರೋನನು ಮೋಶೆಯ ಒಂದು ಕಡೆಯಲ್ಲಿದ್ದನು; ಹೂರನು ಮೋಶೆಯ ಇನ್ನೊಂದು ಕಡೆಯಲ್ಲಿದ್ದನು. ಸೂರ್ಯನು ಮುಳುಗುವವರೆಗೆ ಅವರು ಅವನ ಕೈಗಳನ್ನು ಮೇಲೆತ್ತಿ ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಕಲ್ಲನ್ನು ತಂದು ಇಟ್ಟಾಗ, ಅವನು ಅದರ ಮೇಲೆ ಕೂತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ಮೋಶೆಯ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವವರೆಗೆ ಅವನ ಕೈಗಳು ಇಳಿಯದೆ ನಿಂತೇ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:12
15 ತಿಳಿವುಗಳ ಹೋಲಿಕೆ  

ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.


ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು.


ಆದದರಿಂದ ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಸುಧಾರಿಸಿಕೊಳ್ಳಿರಿ;


ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಟ್ಟು ಕೇಳಿಕೊಳ್ಳಬೇಕು. ಸಂದೇಹಪಡುವವನೋ ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆಯಂತೆ ಅಲೆಯುತ್ತಿರುವನು.


ನೀನು ಭಲ್ಲೆಯನ್ನೂ ಯುದ್ಧದ ಕೊಡಲಿಯನ್ನೂ ಹಿಡಿದು ನನ್ನನ್ನು ಹಿಂದಟ್ಟುವ ವೈರಿಗಳನ್ನು ಪ್ರತಿಭಟಿಸು; ನಾನೇ ನಿನ್ನನ್ನು ರಕ್ಷಿಸುವೆನೆಂದು ಅಭಯಕೊಡು.


ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗ ಇಸ್ರಾಯೇಲ್ಯರು ಬಲವಾಗುವರು; ಇಳಿಸುವಾಗ ಅಮಾಲೇಕ್ಯರು ಬಲವಾಗುವರು.


ಹೀಗಿರುವದರಿಂದ ಯೆಹೋಶುವನು ಅಮಾಲೇಕ್ಯರನ್ನೂ ಅವರ ಭಟರನ್ನೂ ಕತ್ತಿಯಿಂದ ಕೆಡವಿಬಿಟ್ಟನು.


ಮೊದಲು ಅವನು ಹಿರಿಯರಿಗೆ - ನಾವು ತಿರಿಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರ್ರಿ; ಆರೋನನೂ ಹೂರನೂ ನಿಮ್ಮ ಬಳಿಯಲ್ಲಿದ್ದಾರಷ್ಟೆ; ಯಾವನಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ ಎಂದು ಹೇಳಿದನು.


ಪಟ್ಟಣದವರೆಲ್ಲರನ್ನೂ ಸಂಹರಿಸುವವರೆಗೆ ಯೆಹೋಶುವನು ಈಟಿಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು