ವಿಮೋಚನಕಾಂಡ 17:4 - ಕನ್ನಡ ಸತ್ಯವೇದವು J.V. (BSI)4 ಆಗ ಮೋಶೆಯು ಯೆಹೋವನಿಗೆ ಮೊರೆಯಿಟ್ಟು - ಈ ಜನರಿಗೋಸ್ಕರ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲಾ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಮೋಶೆ ಯೆಹೋವನಿಗೆ ಮೊರೆಯಿಟ್ಟು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವ ಹಾಗಿದ್ದಾರಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಮೋಶೆ ಸರ್ವೇಶ್ವರನಿಗೆ ಮೊರೆಯಿಟ್ಟನು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವಂತಿದ್ದಾರೆ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಮೋಶೆಯು ಯೆಹೋವನಿಗೆ ಮೊರೆಯಿಟ್ಟು, “ಈ ಜನರ ವಿಷಯದಲ್ಲಿ ನಾನೇನು ಮಾಡಲಿ? ಅವರು ಕಲ್ಲೆಸೆದು ನನ್ನನ್ನು ಕೊಲ್ಲುವುದಕ್ಕೆ ಸಿದ್ಧರಾಗಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಮೋಶೆಯು ಯೆಹೋವ ದೇವರಿಗೆ ಮೊರೆಯಿಟ್ಟು, “ಈ ಜನರಿಗೆ ನಾನೇನು ಮಾಡಲಿ? ಅವರು ಬಹಳಮಟ್ಟಿಗೆ ನನಗೆ ಕಲ್ಲೆಸೆಯುವುದಕ್ಕಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |