Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:7 - ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:7
21 ತಿಳಿವುಗಳ ಹೋಲಿಕೆ  

ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ಮಸ್ಸಾದಿನದಲ್ಲಿ ಮಾಡಿದಂತೆ ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ಇಸ್ರಾಯೇಲ್ಯರು ಅಲ್ಲಿ ಯೆಹೋವನ ಸಂಗಡ ವಿವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ಮೆರೀಬಾ ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಮಹಾಮಹಿಮೆಯನ್ನು ತೋರ್ಪಡಿಸಿದನು.


ತಬೇರಾ, ಮಸ್ಸಾ, ಕಿಬ್ರೋತ್‍ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಲ್ಲಾ.


ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು.


ಆರೋನನು ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ನಾನು ಇಸ್ರಾಯೇಲ್ಯರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಕೂಡದು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್ ಗಾದ್ ಮನಸ್ಸೆಕುಲಗಳವರಿಗೆ - ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದದರಿಂದ ಆತನು ನಮ್ಮ ಮಧ್ಯದಲ್ಲಿರುತ್ತಾನೆಂದು ಈಗ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲ್ಯರನ್ನು ಯೆಹೋವನ ಶಿಕ್ಷಾಹಸ್ತಕ್ಕೆ ತಪ್ಪಿಸಿದ್ದೀರಿ ಅಂದನು.


ಆಗ ನಾನು ಅವರ ಮೇಲೆ ಬಲುಸಿಟ್ಟಾಗಿ ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು; ಆದದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು - ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆಹೋದದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿದವಲ್ಲಾ ಅಂದುಕೊಳ್ಳುವರು.


ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ಚಿನ್ ಅರಣ್ಯದಲ್ಲಿ ಇಸ್ರಾಯೇಲ್ಯರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದದರಿಂದ ಆ ದೇಶವನ್ನು ಸೇರಬಾರದು ಎಂದು ಹೇಳಿದನು. ಚಿನ್ ಅರಣ್ಯದಲ್ಲಿ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.


ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.


ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ.


ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಲ್ಲಿ ಸಂಶಯಾತ್ಮರಾಗಿ ದೇವರನ್ನು ಪರೀಕ್ಷಿಸಿದರು.


ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ. ಇಸ್ರಾಯೇಲ್ಯರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು -


ಮತ್ತು ಅವರು ಮೆರೀಬದ ಪ್ರವಾಹ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು