Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:20 - ಕನ್ನಡ ಸತ್ಯವೇದವು J.V. (BSI)

20 ಮತ್ತು ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನೂ ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಂತೆಯೇ ದೇವರ ಆಜ್ಞಾವಿಧಿಗಳನ್ನು ಜನರಿಗೆ ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನು ಹಾಗು ಕೈಗೊಳ್ಳಬೇಕಾದ ಕಾರ್ಯಗಳನ್ನು ತಿಳಿಯಪಡಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸಬೇಕು; ನಿಬಂಧನೆಗಳನ್ನು ಉಲ್ಲಂಘಿಸದಂತೆ ಅವರನ್ನು ಎಚ್ಚರಿಸಬೇಕು; ಜೀವಿಸಲು ಸರಿಯಾದ ಮಾರ್ಗವನ್ನು ಅವರಿಗೆ ಬೋಧಿಸಬೇಕು; ಅವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕಲಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಅವರು ಮಾಡಬೇಕಾದ ಕೆಲಸವನ್ನೂ ಅವರಿಗೆ ತೋರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:20
21 ತಿಳಿವುಗಳ ಹೋಲಿಕೆ  

ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಇಸ್ರಾಯೇಲ್ಯರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.


ಅದಲ್ಲದೆ ನೀವು ಮಾಡಬೇಕಾದ ಎಲ್ಲಾ ಕಾರ್ಯಗಳ ವಿಷಯದಲ್ಲಿಯೂ ನಾನು ಆ ಕಾಲದಲ್ಲಿ ನಿಮಗೆ ಆಜ್ಞೆ ಕೊಟ್ಟೆನು.


[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ].


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಇಸ್ರಾಯೇಲ್ಯರೇ, ಕೇಳಿರಿ; ನೀವು ಬದುಕಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಂತೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ; ನಾನು ವಿಚಾರಣೆಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ ಎಂದು ಹೇಳಿದನು.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ನಿನ್ನ ದೇವರಾದ ಯೆಹೋವನು ನಾವು ನಡೆಯಬೇಕಾದ ಮಾರ್ಗವನ್ನೂ ಮಾಡತಕ್ಕ ಕಾರ್ಯವನ್ನೂ ತೋರಿಸುವ ಹಾಗೆ ನಮಗಾಗಿ, ಅಂದರೆ ಉಳಿದಿರುವ ಈ ಜನರೆಲ್ಲರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು; ನಿನ್ನ ಕಣ್ಣಿಗೆ ಕಾಣುವ ಪ್ರಕಾರ ಅಪಾರ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ ಎಂದು ವಿಜ್ಞಾಪಿಸಿದರು.


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಆದಕಾರಣ ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸುವವರಾಗಿರಬೇಕು.


ಒಬ್ಬ ಮನುಷ್ಯಸು ತನ್ನ ಮನೆಯನ್ನು ಬಿಟ್ಟು ಬೇರೊಂದು ದೇಶಕ್ಕೆ ಹೋಗುವಾಗ ತನ್ನ ಆಳುಗಳಿಗೆ ಮನೇ ಆಡಳಿತವನ್ನು ಒಪ್ಪಿಸಿಕೊಟ್ಟು ಒಬ್ಬೊಬ್ಬನಿಗೆ ಅವನವನ ಕೆಲಸವನ್ನು ನೇವಿುಸಿ ಬಾಗಿಲುಕಾಯುವವನನ್ನು ಕರೆದು - ನೀನು ಎಚ್ಚರವಾಗಿರಬೇಕೆಂದು ಅಪ್ಪಣೆ ಕೊಡುವ ಪ್ರಕಾರ [ನಾನು ನಿಮಗೆ ಅಪ್ಪಣೆ ಕೊಡುತ್ತೇನೆ].


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು ಎಂದು ಹೇಳಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು