ವಿಮೋಚನಕಾಂಡ 18:22 - ಕನ್ನಡ ಸತ್ಯವೇದವು J.V. (BSI)22 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ; ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವದರಿಂದ ನಿನಗೆ ಸುಲಭವಾಗಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈ ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ಈ ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಈ ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇವರು ಎಲ್ಲಾ ಕಾಲಗಳಲ್ಲಿಯೂ ಜನರಿಗೆ ನ್ಯಾಯತೀರಿಸಲಿ. ಆದರೆ ದೊಡ್ಡ ವ್ಯಾಜ್ಯಗಳನ್ನೆಲ್ಲಾ ನಿನ್ನ ಮುಂದೆ ತಂದು, ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಆಗ ನಿನಗೆ ಸುಲಭವಾಗುವುದು. ಅವರೂ ನಿನ್ನ ಸಂಗಡ ಭಾರವನ್ನು ಹೊರುವರು. ಅಧ್ಯಾಯವನ್ನು ನೋಡಿ |