ವಿಮೋಚನಕಾಂಡ 18:3 - ಕನ್ನಡ ಸತ್ಯವೇದವು J.V. (BSI)3 ಮೋಶೆ - ನಾನು ಅನ್ಯದೇಶದ ಪ್ರವಾಸಿಯಾಗಿದ್ದೇನೆಂದು ಹೇಳಿ ತನ್ನ ಹಿರೀ ಮಗನಿಗೆ ಗೇರ್ಷೋಮೆಂದು ಹೆಸರಿಟ್ಟಿದ್ದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆ ಪುತ್ರರಲ್ಲಿ ಒಬ್ಬನಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು. ಏಕೆಂದರೆ ಮೋಶೆಯು, “ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮೋಶೆ ತಾನು ಅನ್ಯದೇಶದ ಪ್ರವಾಸಿ ಎಂದು ಹೇಳಿ ತನ್ನ ಹಿರಿಯ ಮಗನಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇತ್ರೋನನು ಮೋಶೆಯ ಇಬ್ಬರು ಗಂಡುಮಕ್ಕಳನ್ನೂ ಕರೆದುಕೊಂಡು ಬಂದನು. ಮೊದಲಿನ ಮಗನ ಹೆಸರು ಗೇರ್ಷೋಮ್. ಅವನು ಹುಟ್ಟಿದಾಗ ಮೋಶೆಯು, “ನಾನು ಪರದೇಶದಲ್ಲಿ ಅಪರಿಚಿತನಾಗಿದ್ದೇನೆ” ಎಂದು ಹೇಳಿ ಆ ಹೆಸರನ್ನು ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಮೋಶೆಯು, “ನಾನು ಪರದೇಶದಲ್ಲಿ ಅನ್ಯನಾಗಿದ್ದೆನು,” ಎಂದು ಹೇಳಿ ಆ ಪುತ್ರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿಟ್ಟಿದ್ದನು. ಅಧ್ಯಾಯವನ್ನು ನೋಡಿ |