Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:4 - ಕನ್ನಡ ಸತ್ಯವೇದವು J.V. (BSI)

4 ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು ಎಂದು ಹೇಳಿ ಕಿರೀ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಆ ಮಗನಿಗೆ “ಎಲೀಯೆಜೆರ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತನ್ನ ತಂದೆಯ ದೇವರು ನನಗೆ ಸಹಾಯಕರಾಗಿದ್ದು ನನ್ನನ್ನು ಫರೋಹನ ಕತ್ತಿಯಿಂದ ಕಾಪಾಡಿದರು ಎಂದು ಕಿರಿಯ ಮಗನಿಗೆ ‘ಎಲಿಯೇಜರ್’ ಎಂದು ಹೆಸರಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇನ್ನೊಬ್ಬ ಮಗನ ಹೆಸರು ಎಲೀಯೆಜೆರ್. ಇವನು ಹುಟ್ಟಿದಾಗ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯ ಮಾಡಿ ಈಜಿಪ್ಟಿನ ಅರಸನಿಂದ ರಕ್ಷಿಸಿದನು” ಎಂದು ಹೇಳಿ ಆ ಹೆಸರನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು, ಫರೋಹನ ಖಡ್ಗದಿಂದ ಬಿಡುಗಡೆ ಮಾಡಿದನು,” ಎಂದು ಹೇಳಿ ಇನ್ನೊಬ್ಬ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:4
19 ತಿಳಿವುಗಳ ಹೋಲಿಕೆ  

ಆದದರಿಂದ - ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು? ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ಸಭಾನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ;


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ಆಗ ಪೇತ್ರನು ಎಚ್ಚರವಾಗಿ - ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿದುಬಂದಿದೆ ಅಂದುಕೊಂಡನು.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.


ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ಮೋಶೆಯ ಮಕ್ಕಳು - ಗೇರ್ಷೋಮ್, ಎಲೀಯೆಜೆರ್ ಎಂಬವರು.


ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸಿದ್ದರಿಂದ ಮೋಶೆ ಫರೋಹನ ಬಳಿಯಿಂದ ಓಡಿಹೋಗಿ ವಿುದ್ಯಾನ್ ದೇಶವನ್ನು ಸೇರಿದನು.


ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ವಿುದ್ಯಾನ್ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಇಬ್ಬರು ಗಂಡುಮಕ್ಕಳನ್ನು ಪಡೆದನು.


ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.


ಇದು ನಿನ್ನ ತಂದೆಯ ದೇವರಿಂದಾಯಿತು, ಆತನು ನಿನಗೆ ಸಹಾಯ ಮಾಡಲಿ; ಸರ್ವಶಕ್ತನಾದ ದೇವರಿಂದಾಯಿತು,ಅತನು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಣ ಆಕಾಶದಿಂದಲೂ ಕೆಳಗಣ ಸಾಗರದ ಸೆಲೆಗಳಿಂದಲೂ ಸ್ತನ್ಯದಿಂದಲೂ ಗರ್ಭದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.


ಆಕೆ ಗಂಡು ಮಗುವನ್ನು ಹೆರಲು, ಮೋಶೆ - ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ ಎಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.


ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಹತ್ತಿಸಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.


ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ; ಆದರೆ ರೆಹಬ್ಯನಿಗೆ ಅನೇಕ ಮಂದಿ ಮಕ್ಕಳಿದ್ದರು.


ಅವನು ಮೋಶೆಗೆ - ನನ್ನ ಬಳಿಯಿಂದ ಹೋಗು; ಇನ್ನು ಮುಂದೆ ನನ್ನ ಮುಖದೆದುರಿಗೆ ಬರಲೇ ಕೂಡದು; ಎಚ್ಚರ; ತಿರಿಗಿ ಸನ್ನಿಧಿಗೆ ಬಂದರೆ ಮರಣದಂಡನೆ ಆಗುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು