Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:6 - ಕನ್ನಡ ಸತ್ಯವೇದವು J.V. (BSI)

6 ಅವನು ಮೋಶೆಗೆ - ನಿನ್ನ ಮಾವನಾದ ನಾನೂ ನಿನ್ನ ಹೆಂಡತಿಯೂ ಆಕೆಯ ಇಬ್ಬರು ಮಕ್ಕಳೂ ಬಂದಿದ್ದೇವೆಂದು ಹೇಳಿಕಳುಹಿಸಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಮೋಶೆಗೆ, “ನಿನ್ನ ಮಾವನಾದ ಇತ್ರೋವನಾದ ನಾನು ನಿನ್ನ ಹೆಂಡತಿಯನ್ನು, ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನಿನ್ನ ಮಾವನಾದ ನಾನು, ನಿನ್ನ ಹೆಂಡತಿ ಹಾಗು ನಿನ್ನ ಇಬ್ಬರು ಮಕ್ಕಳು ಬಂದಿದ್ದೇವೆ” ಎಂದು ಮೋಶೆಗೆ ಹೇಳಿ ಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇತ್ರೋನನು ಮೋಶೆಗೆ, “ನಾನು ನಿನ್ನ ಮಾವನಾದ ಇತ್ರೋನ. ನಾನು ನಿನ್ನ ಹೆಂಡತಿಯನ್ನು ಮತ್ತು ಆಕೆಯ ಇಬ್ಬರು ಗಂಡುಮಕ್ಕಳನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತಿದ್ದೇನೆ” ಎಂಬ ಸಂದೇಶವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವನು ಮೋಶೆಗೆ, “ನಿನ್ನ ಮಾವ ಇತ್ರೋವನೆಂಬ ನಾನು ನಿನ್ನ ಹೆಂಡತಿ, ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:6
3 ತಿಳಿವುಗಳ ಹೋಲಿಕೆ  

ಮೋಶೆಯ ಮಾವನಾದ ಇತ್ರೋವನು ಮೋಶೆಯ ಮಕ್ಕಳನ್ನೂ ಹೆಂಡತಿಯನ್ನೂ ಕರೆದುಕೊಂಡು ಅರಣ್ಯದಲ್ಲಿ ದೇವರ ಬೆಟ್ಟದ ಹತ್ತಿರ ಇಳುಕೊಂಡಿದ್ದ ಮೋಶೆಯ ಬಳಿಗೆ ಬಂದನು.


ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.


ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಹತ್ತಿಸಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು