Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:10 - ಕನ್ನಡ ಸತ್ಯವೇದವು J.V. (BSI)

10 ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ಈ ದಿನ ಮತ್ತು ನಾಳೆ ನೀನು ಜನರನ್ನು ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧಪಡಿಸಬೇಕು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:10
24 ತಿಳಿವುಗಳ ಹೋಲಿಕೆ  

ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಮತ್ತು ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು; ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ ಅವರನ್ನು ಶುದ್ಧೀಕರಿಸುವದಕ್ಕೆ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಇದಲ್ಲದೆ ಯೆಹೋಶುವನು ಜನರಿಗೆ - ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು ಎಂದು ಹೇಳಿದನು.


ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗಂದರೆ - ನೀನು ಅವರ ಮೇಲೆ ದೋಷಪರಿಹಾರಕಜಲವನ್ನು ಚಿವಿುಕಿಸಬೇಕು; ಅವರು ಸರ್ವಾಂಗಕ್ಷೌರಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಬೇಕು.


ಅವನು ನನಗೆ - ಇವರು ಆ ಮಹಾ ಹಿಂಸೆಯನ್ನು ಅನುಭವಿಸಿ ಬಂದವರು; ಯಜ್ಞದ ಕುರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿದ್ದಾರೆ.


ನೀನು ಅವರಿಗೆ - ಇಸ್ರಾಯೇಲ್ಯರೇ, ನಾಳೆಗೋಸ್ಕರ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದುಂಟು. ನೀವು ಅದನ್ನು ತೆಗೆದುಹಾಕುವವರೆಗೂ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಅನ್ನುತ್ತಾನೆ.


ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧಪಡಿಸಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.


ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ; ಆಮೇಲೆ ನೀವು ಪಾಳೆಯದೊಳಗೆ ಬರಬಹುದು ಎಂದು ಹೇಳಿದನು.


ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಚರ್ಮವನ್ನು ಸುಲಿಯುವದು [ಶುದ್ಧಿಪಡಿಸಿಕೊಂಡ] ಕೆಲವು ಮಂದಿ ಯಾಜಕರಿಂದ ಆಗದೆ ಹೋಯಿತು. ಆದದರಿಂದ ವಿುಕ್ಕ ಯಾಜಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸ ತೀರುವ ತನಕ ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು.


ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ ಎಂದು ಹೇಳಿ ಇಷಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ಅದಲ್ಲದೆ ಇಸ್ರಾಯೇಲ್ಯರಿಗೆ ಹೀಗೆ ಹೇಳು - ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸಾಹಾರವು ದೊರೆಯುವದು. ನೀವು ಯೆಹೋವನಿಗೆ ಕೇಳಿಸುವಂತೆ - ನಮಗೆ ಮಾಂಸವನ್ನು ಕೊಡುವವರೇ ಇಲ್ಲ ; ಐಗುಪ್ತದೇಶದಲ್ಲಿ ಎಷ್ಟೋ ಸುಖವಾಗಿದ್ದೆವಲ್ಲಾ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.


ಅವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಅದನ್ನು ಚಿವಿುಕಿಸಬೇಕು. ಅಶುದ್ಧನಾದವನು ಏಳನೆಯ ದಿನದಲ್ಲಿ ದೋಷಪರಿಹಾರಹೊಂದಿದವನಾಗಿ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿ ಸಾಯಂಕಾಲದಲ್ಲಿ ಶುದ್ಧನಾಗುವನು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವದಕ್ಕೆ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಕಾಲುಗಳನ್ನು ಕಟ್ಟಿಕೊಂಡಿದ್ದಿಲ್ಲ, ಮೀಸೆಯನ್ನು ಕತ್ತರಿಸಿದ್ದಿಲ್ಲ, ಬಟ್ಟೆಗಳನ್ನು ಒಗೆಸಿಕೊಂಡಿದ್ದಿಲ್ಲ,


ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು; ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು