Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:12 - ಕನ್ನಡ ಸತ್ಯವೇದವು J.V. (BSI)

12 ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಮೇರೆಯನ್ನು ಮಾಡಿಸಿ ಜನರಿಗೆ - ಎಚ್ಚರಿಕೆಯಾಗಿರ್ರಿ, ನೀವು ಈ ಬೆಟ್ಟವನ್ನು ಏರಲೂ ಕೂಡದು ಅದರ ಅಂಚನ್ನು ಮುಟ್ಟಲೂಕೂಡದು. ಮುಟ್ಟಿದವನಿಗೆ ಅಗತ್ಯವಾಗಿ ಪ್ರಾಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜನರು ಹತ್ತಿರಕ್ಕೆ ಬಾರದಂತೆ ನೀನು ಬೆಟ್ಟದ ಸುತ್ತಲೂ ಒಂದು ಮೇರೆಯನ್ನು ಏರ್ಪಡಿಸು. ಮತ್ತು ಜನರಿಗೆ ‘ಎಚ್ಚರಿಕೆ, ನೀವು ಈ ಬೆಟ್ಟವನ್ನು ಏರಕೂಡದು; ಅದರ ಅಂಚನ್ನೂ ಮುಟ್ಟಕೂಡದು. ಮುಟ್ಟಿದವನಿಗೆ ಮರಣ ಶಿಕ್ಷೆಯಾಗುವುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-13 ಆದರೆ ಬೆಟ್ಟದಿಂದ ದೂರವಿರಬೇಕೆಂದು ನೀನು ಜನರಿಗೆ ಹೇಳಬೇಕು. ಒಂದು ಗೆರೆಯನ್ನು ಹಾಕಿ ಆ ಗೆರೆಯನ್ನು ದಾಟಬಾರದೆಂದು ಅವರಿಗೆ ತಿಳಿಸು. ಯಾವ ವ್ಯಕ್ತಿಯಾಗಲಿ ಬೆಟ್ಟವನ್ನು ಮುಟ್ಟಿದರೆ ಅವನನ್ನು ಕಲ್ಲುಗಳಿಂದಾಗಲಿ ಬಾಣಗಳಿಂದಾಗಲಿ ಕೊಲ್ಲಬೇಕು. ಯಾವ ಪ್ರಾಣಿಯಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕೊಲ್ಲಬೇಕು. ಯಾರೂ ಬೆಟ್ಟವನ್ನು ಮುಟ್ಟಕೂಡದು. ಕೊಂಬಿನ ತುತ್ತೂರಿ ಊದಿದಾಗ ಜನರು ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ, ‘ಅವರು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತು ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:12
11 ತಿಳಿವುಗಳ ಹೋಲಿಕೆ  

ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗತಕ್ಕ ಮಾರ್ಗವು ನಿಮಗೆ ಗೊತ್ತಾಗುವದು; ಆ ಮಾರ್ಗದಲ್ಲಿ ನೀವು ಮುಂಚೆ ಬರಲಿಲ್ಲವಲ್ಲಾ ಅಂದರು.


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವದಕ್ಕಿದ್ದೀರಷ್ಟೆ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ನೀವು ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು ನೋಡಿಕೊಳ್ಳಿರಿ; ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವದು.


ಅದಕ್ಕೆ ಮೋಶೆ - ಸೀನಾಯಿಬೆಟ್ಟವನ್ನೇರುವದಕ್ಕೆ ಜನರಿಂದಾಗದು; ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿ ನಿನಗಾಗಿ ಪ್ರತ್ಯೇಕಿಸಲಿಕ್ಕೆ ನೀನು ಆಜ್ಞಾಪಿಸಿದಿಯಲ್ಲಾ ಅಂದನು.


ಆಗ ಯೆಹೋವನು ಮೋಶೆಗೆ - ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು; ಅವರು ನೋಡಬೇಕೆಂಬ ಆಶೆಯಿಂದ ಯೆಹೋವನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.


ಅವನು ಮೋಶೆಗೆ - ನನ್ನ ಬಳಿಯಿಂದ ಹೋಗು; ಇನ್ನು ಮುಂದೆ ನನ್ನ ಮುಖದೆದುರಿಗೆ ಬರಲೇ ಕೂಡದು; ಎಚ್ಚರ; ತಿರಿಗಿ ಸನ್ನಿಧಿಗೆ ಬಂದರೆ ಮರಣದಂಡನೆ ಆಗುವದು ಎಂದು ಹೇಳಿದನು.


ನೀವು ಮುಟ್ಟುವದಕ್ಕೆ ಸಾಧ್ಯವಾದಂಥ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮೋಡದ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ.


ಯಾರೂ ನಿನ್ನ ಜೊತೆಯಲ್ಲಿ ಮೇಲಕ್ಕೆ ಬರಕೂಡದು. ಈ ಬೆಟ್ಟದ ಪ್ರದೇಶದಲ್ಲಿ ಯಾರೂ ಎಲ್ಲಿಯೂ ಕಾಣಿಸಕೂಡದು; ಕುರಿದನಗಳೂ ಬೆಟ್ಟದ ಮುಂದೆ ಮೇಯಕೂಡದು ಎಂದು ಹೇಳಿದನು.


ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಅವನ ಜೊತೆಯವರಲ್ಲಿ ಸಮೀಪಕ್ಕೆ ಯಾರೂ ಬರಬಾರದು; ವಿುಕ್ಕ ಜನರು ಬೆಟ್ಟವನ್ನು ಹತ್ತಬಾರದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು