Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:14 - ಕನ್ನಡ ಸತ್ಯವೇದವು J.V. (BSI)

14 ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು ಅವರನ್ನು ಪರಿಶುದ್ಧಗೊಳಿಸಿದನು; ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಂತೆಯೇ ಮೋಶೆ ಬೆಟ್ಟದಿಂದ ಇಳಿದು ಬಂದು ಜನರನ್ನು ಪರಿಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೋಶೆ ಬೆಟ್ಟದಿಂದಿಳಿದು ಹೋದನು. ಅವನು ಜನರ ಬಳಿಗೆ ಹೋಗಿ ವಿಶೇಷ ಸಂದರ್ಶನಕ್ಕಾಗಿ ಅವರನ್ನು ಸಿದ್ಧ ಮಾಡಿದನು. ಜನರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:14
7 ತಿಳಿವುಗಳ ಹೋಲಿಕೆ  

ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ಅಂಥವನನ್ನು ಯಾರೂ ಮುಟ್ಟಕೂಡದು; ಕಲ್ಲುಗಳನ್ನಾದರೂ ಬಾಣಗಳನ್ನಾದರೂ ಎಸೆದು ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ ಪಶುವಾಗಲಿ ಬೆಟ್ಟವನ್ನು ಮುಟ್ಟಿದರೆ ಉಳಿಯಬಾರದು. ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು ಅಂದನು.


ಆಗ ಮೋಶೆ ಜನರಿಗೆ - ಮೂರನೆಯ ದಿನದಲ್ಲಿ ಸಿದ್ಧವಾಗಿರ್ರಿ; ಯಾವ ಪುರುಷನೂ ಸ್ತ್ರೀಸಂಗಮಾಡಬಾರದು ಎಂದು ಹೇಳಿದನು.


ನಮ್ಮ ಎಲ್ಲಾ ಯುದ್ಧಪ್ರಯಾಣಗಳಲ್ಲಿ ಸ್ತ್ರೀನಿಷೇಧ ಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾನುಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುವವಲ್ಲವೇ ಎಂದು ಉತ್ತರಕೊಟ್ಟನು.


ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವೂ ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿರುವ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು; ಅವುಗಳನ್ನು ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು