Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:15 - ಕನ್ನಡ ಸತ್ಯವೇದವು J.V. (BSI)

15 ಆಗ ಮೋಶೆ ಜನರಿಗೆ - ಮೂರನೆಯ ದಿನದಲ್ಲಿ ಸಿದ್ಧವಾಗಿರ್ರಿ; ಯಾವ ಪುರುಷನೂ ಸ್ತ್ರೀಸಂಗಮಾಡಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಸಿದ್ಧವಾಗಿರಿ. ಯಾವ ಪುರುಷನೂ ಸ್ತ್ರೀಸಂಗ ಮಾಡಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಮೋಶೆ ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ; ಯಾವ ಪುರುಷನು ಸ್ತ್ರೀಸಂಗ ಮಾಡಬಾರದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಮೋಶೆ ಜನರಿಗೆ, “ಮೂರನೆಯ ದಿನದಲ್ಲಿ ಯೆಹೋವನೊಡನೆ ಒಂದು ವಿಶೇಷ ಸಂದರ್ಶನಕ್ಕಾಗಿ ಸಿದ್ಧರಾಗಿರಿ. ಅಲ್ಲಿಯವರೆಗೆ, ಪುರುಷರು ಸ್ತ್ರೀಯರ ಸಂಗ ಮಾಡಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ, ನೀವು ಲೈಂಗಿಕ ಸಂಬಂಧದಿಂದ ದೂರವಾಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:15
16 ತಿಳಿವುಗಳ ಹೋಲಿಕೆ  

ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ದಂಪತಿ ಧರ್ಮವನ್ನು ಬಿಟ್ಟು ಅಗಲಿರಬಹುದೇ ಹೊರತು ಅನ್ಯಥಾ ಹಾಗೆ ಮಾಡಬಾರದು; ಆಮೇಲೆ ಸೈತಾನನು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ನಿಮಗೆ ದುಷ್ಪ್ರೇರಣೆಮಾಡದಂತೆ ತಿರಿಗಿ ಕೂಡಿಕೊಳ್ಳಿರಿ.


ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು.


ಜನರನ್ನು ಒಟ್ಟಿಗೆ ಬರಮಾಡಿರಿ, ಕೂಟವನ್ನು ಏರ್ಪಡಿಸಿರಿ, ವೃದ್ಧರನ್ನು ಕೂಡಿಸಿರಿ, ಮಕ್ಕಳನ್ನೂ ಮೊಲೆಕೂಸುಗಳನ್ನೂ ಸೇರಿಸಿರಿ; ವಧೂವರರೂ ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಆಗ - ನಾವು ಬಹು ವರುಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಲ್ಲಿ ಉಪವಾಸಮಾಡಿ ಅಳಬೇಕೋ ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ ಎಂಬದಾಗಿ ಅವರಿಗೆ ಅಪ್ಪಣೆಕೊಟ್ಟಿದ್ದರು.


ಮೂರನೆಯ ರಥಕ್ಕೆ ಬಿಳಿ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.


ಆದಕಾರಣ, ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ.


ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು ಅವರನ್ನು ಪರಿಶುದ್ಧಗೊಳಿಸಿದನು; ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವೂ ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿರುವ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು