Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:18 - ಕನ್ನಡ ಸತ್ಯವೇದವು J.V. (BSI)

18 ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದು ಬಂದದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು; ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:18
41 ತಿಳಿವುಗಳ ಹೋಲಿಕೆ  

ಯೆಹೋವನ ಮುಂದೆ ಪರ್ವತಗಳು ಕರಗಿ ಹೋದವು, ಇಸ್ರಾಯೇಲ್ ದೇವರಾದ ಯೆಹೋವನ ಎದುರಿಗೆ ಆ ಸೀನಾಯಿಬೆಟ್ಟವೂ ನೀರಾಯಿತು.


ಯೆಹೋವನೇ, ಆಕಾಶವನ್ನು ತಗ್ಗಿಸಿ ಇಳಿದು ಬಾ; ಪರ್ವತಗಳನ್ನು ಮುಟ್ಟು, ಆಗ ಅವು ಹೊಗೆ ಹಾಯುವವು.


ದೇವರ ತೇಜಸ್ಸಾನ್ನಿಧ್ಯದಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಪವಿತ್ರಸ್ಥಾನವು ತುಂಬಿದ ಕಾರಣ ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರಸ್ಥಾನದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.


ಅಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಯೆಹೋವನ ದೂತನು ಅವನಿಗೆ ಕಾಣಿಸಿಕೊಂಡನು. ಹೇಗಂದರೆ ಅವನು ಒಂದು ಮುಳ್ಳಿನ ಪೊದೆಯನ್ನು ಕಂಡನು ಆ ಪೊದೆಯು ಬೆಂಕಿಯಿಂದ ಉರಿಯುತ್ತಿದ್ದರೂ ಅದು ಸುಟ್ಟುಹೋಗದೆ ಇತ್ತು.


ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.


ಸೊದೋಮ್ ಗೊಮೋರಗಳ ಕಡೆಗೂ ಆ ಎಲ್ಲಾ ಸೀಮೆಯ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಏರಿತು.


ಆತನು ದೃಷ್ಟಿಸಿದ ಮಾತ್ರದಿಂದಲೇ ಭೂವಿುಯು ಕಂಪಿಸುತ್ತದೆ; ಮುಟ್ಟುತ್ತಲೇ ಪರ್ವತಗಳು ಹೊಗೆಹಾಯುತ್ತವೆ.


ಯೆಹೋವನು ಸೀನಾಯಿಬೆಟ್ಟದಿಂದ ಬಂದು ಸೇಯೀರ್ ಎಂಬ ಬೆಟ್ಟದ ಸೀಮೆಯೊಳಗಿಂದ ಪ್ರಕಾಶಿಸಿ ಪಾರಾನ್ ಪರ್ವತದಿಂದ ಹೊಳೆದು ಲಕ್ಷಾಂತರ ಪರಿಶುದ್ಧದೂತರ ಮಧ್ಯದಿಂದ ಅವರಿಗೋಸ್ಕರ ದಯಮಾಡಿದನು; ಆತನ ಬಲಪಾರ್ಶ್ವದಲ್ಲಿ ಅಗ್ನಿಸದೃಶವಾದ ಧರ್ಮಶಾಸ್ತ್ರವಿತ್ತು.


ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು; ಆಮೇಲೆ ಇನ್ನು ಮಾತಾಡಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.


ಯೆಹೋವನ ತೇಜಸ್ಸು ಬೆಟ್ಟದ ಶಿಖರದ ಮೇಲೆ ಪ್ರಜ್ವಲಿಸುವ ಬೆಂಕಿಯೋಪಾದಿಯಲ್ಲಿ ಇಸ್ರಾಯೇಲ್ಯರಿಗೆ ಕಾಣಿಸಿತು.


ಆತನ ಧ್ವನಿಯು ಆ ಕಾಲದಲ್ಲಿ ಭೂವಿುಯನ್ನು ಕದಲಿಸಿತು; ಈಗಲಾದರೋ ಆತನು - ಇನ್ನೊಂದೇ ಸಾರಿ ನಾನು ಭೂವಿುಯನ್ನು ಮಾತ್ರವಲ್ಲದೆ ಪರಲೋಕವನ್ನೂ ನಡುಗಿಸುವೆನೆಂದು ವಾಗ್ದಾನಮಾಡಿದ್ದಾನೆ.


ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿತು; ಧೂಮವು ಮಂದಿರದಲ್ಲೆಲ್ಲಾ ತುಂಬಿತು.


ಹೊತ್ತು ಮುಣುಗಿ ಕಾರ್ಗತ್ತಲಾದಾಗ ಇಗೋ ಹೊಗೆಹಾಯುವ ಒಲೆಯೂ ಉರಿಯುವ ದೀವಟಿಗೆಯೂ ಕಾಣಿಸಿ ಆ ತುಂಡುಗಳ ನಡುವೆ ಹೋದವು.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.


ನೀವು ಮುಟ್ಟುವದಕ್ಕೆ ಸಾಧ್ಯವಾದಂಥ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮೋಡದ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.


ಭೂಲೋಕವೇ, ಕರ್ತನು ಪ್ರತ್ಯಕ್ಷನಾಗಿದ್ದಾನೆ, ಯಾಕೋಬನ ದೇವರು ನಿನ್ನ ಮುಂದೆ ಇದ್ದಾನೆ, ಕಂಪಿಸು.


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ವಿುಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂವಿುಯು ಅಲ್ಲಾಡಿ ಕಂಪಿಸಿತು.


ಆ ಗುಡುಗುವಿುಂಚುಗಳನ್ನೂ ತುತೂರಿ ಧ್ವನಿಯಾಗುತ್ತಿರುವದನ್ನೂ ಬೆಟ್ಟದಿಂದ ಹೊಗೆ ಹೊರಡುವದನ್ನೂ ಜನರೆಲ್ಲರು ನೋಡಿ ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ಅಂಥವನನ್ನು ಯಾರೂ ಮುಟ್ಟಕೂಡದು; ಕಲ್ಲುಗಳನ್ನಾದರೂ ಬಾಣಗಳನ್ನಾದರೂ ಎಸೆದು ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ ಪಶುವಾಗಲಿ ಬೆಟ್ಟವನ್ನು ಮುಟ್ಟಿದರೆ ಉಳಿಯಬಾರದು. ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು ಅಂದನು.


ಯಾವಾಗ ಕೊಡುವನಂದರೆ ಯೇಸು ಕರ್ತನು ತನ್ನ ಶಕ್ತಿಯನ್ನು ತೋರ್ಪಡಿಸುವ ದೇವದೂತರಿಂದ ಕೂಡಿದವನಾಗಿ ಉರಿಯುವ ಬೆಂಕಿಯಲ್ಲಿ ಆಕಾಶದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕತ್ತಲಾದವು.


ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು.


ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಬರಮಾಡಲು ಅವರು ಬೆಟ್ಟದ ಬುಡದಲ್ಲಿ ನಿಂತುಕೊಂಡರು.


ಬೆಳಿಗ್ಗೆ ನೀನು ಸಿದ್ಧವಾಗಿದ್ದು ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.


ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತಾಡಲಾಗಿ


ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಲುಗಿದರೆ ಎಷ್ಟೋ ಒಳ್ಳೇದು!


ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಿ ಅವರಿಗೆ ನೀತಿನಿಯಮಗಳನ್ನೂ ಯಥಾರ್ಥ ಧರ್ಮೋಪದೇಶವನ್ನೂ ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದಿ.


ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.


ದೇವರೇ, ನೀನು ಹೇರಳ ಮಳೆಸುರಿಸಿ ಬಾಯ್ದೆರೆದಿದ್ದ ನಿನ್ನ ಸ್ವಾಸ್ತ್ಯವನ್ನು ಶಾಂತಿಪಡಿಸಿದಿ.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆಯ ಗುರುತು ಕಾಣಲಿಲ್ಲ.


ಪರ್ವತಗಳು ಟಗರುಗಳಂತೆಯೂ ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.


ಆತನು ನಿಂತುಕೊಳ್ಳಲು ಭೂವಿುಯು ಕಂಪಿಸುತ್ತದೆ; ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಗಳು ಕುಸಿದುಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು