Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:3 - ಕನ್ನಡ ಸತ್ಯವೇದವು J.V. (BSI)

3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದಾಗ ಯೆಹೋವನು ಅವನಿಗೆ ಬೆಟ್ಟದ ಮೇಲಿನಿಂದ ಕೂಗಿ - ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ಯರಿಗೆ ಈ ಮಾತುಗಳನ್ನು ಹೇಳಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರ ಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಮೋಶೆ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋದನು. ಮೋಶೆಯು ಬೆಟ್ಟದ ಮೇಲೆ ಇದ್ದಾಗ ಯೆಹೋವನು ಅವನಿಗೆ, “ಯಾಕೋಬನ ಮಹಾ ಕುಟುಂಬವಾದ ಇಸ್ರೇಲರಿಗೆ ಈ ಸಂಗತಿಗಳನ್ನು ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೋಶೆಯು ದೇವರ ಸನ್ನಿಧಿಗೆ ಬೆಟ್ಟದ ಮೇಲೆ ಹೋದನು. ಆಗ ಯೆಹೋವ ದೇವರು ಸೀನಾಯಿ ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಇದನ್ನು ತಿಳಿಸು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:3
12 ತಿಳಿವುಗಳ ಹೋಲಿಕೆ  

ನೋಡುವದಕ್ಕೆ ಅವನು ದಾರಿ ಬಿಟ್ಟದ್ದನ್ನು ಯೆಹೋವನು ಕಂಡನು. ದೇವರು ಆ ಪೊದೆಯೊಳಗಿಂದ - ಮೋಶೆಯೇ, ಮೋಶೆಯೇ ಎಂದು ಕರೆದನು. ಅದಕ್ಕವನು - ಇಗೋ, ಇದ್ದೇನೆ ಅಂದನು.


ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.


ಜನರು ದೂರದಲ್ಲಿ ನಿಂತಿದ್ದರು; ಮೋಶೆಯೋ ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಸೇರಿದನು.


ಬೆಳಿಗ್ಗೆ ನೀನು ಸಿದ್ಧವಾಗಿದ್ದು ಸೀನಾಯಿ ಬೆಟ್ಟವನ್ನು ಹತ್ತಿ ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತಾಡಿ ಹೀಗಂದನು - ನೀನು ಇಸ್ರಾಯೇಲ್ಯರಿಗೆ


ಯೆಹೋವನು ಸೀನಾಯಿಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು - ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ


ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.


ಆದಕಾರಣ ಮೋಶೆ ಮೊದಲಿದ್ದ ಹಲಿಗೆಗಳಂತೆ ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಯೆಹೋವನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಿಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು