Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:4 - ಕನ್ನಡ ಸತ್ಯವೇದವು J.V. (BSI)

4 ಏನಂದರೆ - ನಾನು ಐಗುಪ್ತ್ಯರಿಗೆ ಏನು ಮಾಡಿದೆನೋ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ನನ್ನ ಸ್ಥಳಕ್ಕೆ ಹೇಗೆ ಸೇರಿಸಿದೆನೋ ಇದನ್ನೆಲ್ಲಾ ನೀವು ನೋಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ‘ನಾನು ನನ್ನ ವೈರಿಗಳಿಗೆ ಮಾಡುವ ಸಂಗತಿಗಳನ್ನು ನೀವು ನೋಡಿದ್ದೀರಿ. ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದಿರಿ. ಹದ್ದು ತನ್ನ ಮರಿಗಳನ್ನು ಹೊತ್ತುಕೊಂಡು ಬರುವಂತೆ ನಾನು ನಿಮ್ಮನ್ನು ಈಜಿಪ್ಟಿನಿಂದ ಇಲ್ಲಿಗೆ ಕರೆದುಕೊಂಡು ಬಂದದ್ದನ್ನು ನೀವು ನೋಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ನಾನು ಈಜಿಪ್ಟಿನವರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಮೇಲೆ ಹೊತ್ತು ಬರುವಂತೆ ನಿಮ್ಮನ್ನು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:4
15 ತಿಳಿವುಗಳ ಹೋಲಿಕೆ  

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು.


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಗರುಡಪಕ್ಷಿಯ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಒಂದು ಕಾಲ, ಎರಡು ಕಾಲ, ಅರ್ಧಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.


ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣು ಮುಂದೆ ಫರೋಹನಿಗೂ ಅವನ ಪರಿವಾರದವರಿಗೂ


ಹೀಗಿರುವದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನೀವು ಐಗುಪ್ತದಿಂದ ಪಾರಾಗಿ ಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು [ನೆರವೇರಿಸುವೆನು]; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ,


ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ?


ನಿಮ್ಮ ಮುಂದುಗಡೆಯಲ್ಲಿ ಹೋಗುವ ನಿಮ್ಮ ದೇವರಾದ ಯೆಹೋವನು ಐಗುಪ್ತ ದೇಶದಲ್ಲಿಯೂ ನೀವು ನೋಡಿದ ಅರಣ್ಯದಲ್ಲಿಯೂ ಪ್ರತ್ಯಕ್ಷನಾಗಿ ನಿಮಗೋಸ್ಕರ ಯುದ್ಧಮಾಡಿದಂತೆಯೇ ಈಗಲೂ ನಿಮ್ಮ ಕಡೆಯವನಾಗಿ ಯುದ್ಧಮಾಡುವನು.


ನೀವು ಈ ಸ್ಥಳಕ್ಕೆ ಸೇರಿದ ಪರ್ಯಂತರವೂ ನಿಮ್ಮ ಪ್ರಯಾಣದಲ್ಲೆಲ್ಲಾ ಮಗನನ್ನು ತಂದೆ ಹೇಗೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ ಎಂದು ನಿಮಗೆ ಹೇಳಿದೆನು.


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲ್ಯರೊಡನೆ ಮಾಡಿದ ನಿಬಂಧನವಲ್ಲದೆ ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ನಿಬಂಧನ ವಚನಗಳು.


ನಿಮ್ಮ ದೇವರಾದ ಯೆಹೋವನು ನಿಮಗೋಸ್ಕರ ಈ ಜನಾಂಗಗಳಿಗೆಲ್ಲಾ ಮಾಡಿದ್ದೆಲ್ಲವನ್ನೂ ನೋಡಿದ್ದೀರಷ್ಟೆ; ಹೌದು, ನಿಮಗಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಯೆಹೋವನೇ.


ಇಸ್ರಾಯೇಲು ಕೇವಲ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯನ್ನಿಟ್ಟು ಆ ನನ್ನ ಮಗನನ್ನು ಐಗುಪ್ತದೇಶದಿಂದ ಕರೆದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು