Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:5 - ಕನ್ನಡ ಸತ್ಯವೇದವು J.V. (BSI)

5 ಹೀಗಿರಲಾಗಿ ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಮಾಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯಜನರಾಗುವಿರಿ; ಸಮಸ್ತ ಭೂವಿುಯೂ ನನ್ನದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:5
54 ತಿಳಿವುಗಳ ಹೋಲಿಕೆ  

ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.


ಯಾಕಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನವಾಗುವದಕ್ಕೆ ಆದುಕೊಂಡನು.


ಯೆಹೋವನೋ ನಿಮ್ಮ ವಿಷಯದಲ್ಲಿ - ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರೆಂದೂ


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ಯಾಹುವು ಯಾಕೋಬನ ವಂಶದವರಾದ ಇಸ್ರಾಯೇಲ್ಯರನ್ನು ಸ್ವಕೀಯಜನವನ್ನಾಗಿ ಆದುಕೊಂಡನಲ್ಲಾ.


ನಿಮ್ಮನ್ನಾದರೋ ಯೆಹೋವನು ತನಗೆ ಸ್ವಕೀಯಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತಲ್ಲಾ.


ನೀವು ಆತನ ಮಾತನ್ನು ಶ್ರದ್ಧೆಯಿಂದ ಲಾಲಿಸಿ ನನ್ನ ಆಜ್ಞೆಗಳನ್ನೆಲ್ಲಾ ನಡಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಉನ್ನತೋನ್ನತವಾದ ಆಕಾಶಮಂಡಲವೂ ಮತ್ತು ಭೂವಿುಯೂ ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ;


ಅದಕ್ಕೆ ಮೋಶೆ - ನಾನು ಪಟ್ಟಣದಿಂದಾಚೆಗೆ ಹೋದಕೂಡಲೇ ಕೈ ಎತ್ತಿ ಯೆಹೋವನನ್ನು ಪ್ರಾರ್ಥಿಸುವೆನು; ಆಗ ಗುಡುಗೂ ಕಲ್ಲಿನ ಮಳೆಯೂ ನಿಂತುಹೋಗುವವು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧಿಕಾರದೊಳಗೆ ಇದೆ ಎಂದು ನೀನು ತಿಳಿದುಕೊಳ್ಳುವಿ.


ಭೂವಿುಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಅದರ ನಿವಾಸಿಗಳೂ ಆತನವೇ.


ಭೂವಿುಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ.


ನಾನು ಸಾಲತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.


ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ಯೆಹೋವನ ವಿಧಿನಿಬಂಧನೆಗಳನ್ನು ಕೈಕೊಂಡು ನಡೆಯುವವರಿಗೆ ಆತನ ಎಲ್ಲಾ ಮಾರ್ಗಗಳು ಕೃಪೆಯೂ ಸತ್ಯತೆಯೂ ಉಳ್ಳವು.


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ಅದಕ್ಕೆ ಜನರು - ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತಾ ಆತನ ಮಾತನ್ನು ಕೇಳುವೆವು ಅಂದರು.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;


ಕರ್ತನೇ, ಯೆಹೋವನೇ, ನೀನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ - ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ ಎಂದು ದೇವರನ್ನು ಪ್ರಾರ್ಥಿಸಿದನು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.


ಯೆಹೋವನು ಹೀಗನ್ನುತ್ತಾನೆ - ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದದ್ದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ನಪುಂಸಕರಿಗೆ


ತರುವಾಯ ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ - ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗಿರುವೆವು ಅಂದರು.


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ


ಆದರೆ ಒಬ್ಬನು ನಿಮಗೆ - ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿವಿುತ್ತವಾಗಿಯೂ ಮನಸ್ಸಿನಲ್ಲಿ ಸಂಶಯಕ್ಕೆ ಸ್ಥಳಕೊಡಬಾರದೆಂಬ ಕಾರಣದಿಂದಲೂ ತಿನ್ನಬೇಡಿರಿ.


ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ಸೊಲೊಮೋನನೇ, ಆ ಸಾವಿರ ರೂಪಾಯಿ ನಿನಗಿರಲಿ, ಫಲವನ್ನು ನೋಡಿಕೊಳ್ಳುವವರಿಗೆ ಇನ್ನೂರು ರೂಪಾಯಿ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಇದಲ್ಲದೆ ದೇವರು ಅಬ್ರಹಾಮನಿಗೆ - ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರೂ ಎಲ್ಲಾ ತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಆದರೆ ನನ್ನನ್ನೇ ಭೂಲೋಕದಲ್ಲಿ ಆಳುವ ಯೆಹೋವನು ಎಂದು ನೀನು ತಿಳುಕೊಳ್ಳುವಂತೆ ನಾನು ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ವಿಶೇಷಿಸುವೆನು; ಅಲ್ಲಿ ಆ ಕಾಟವಿರುವದಿಲ್ಲ.


ನೀವು ನಿಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸಿ ಆತನು ಹೇಳಿದ ಮಾರ್ಗದಲ್ಲೇ ನಡೆದರೆ ಆತನು ವಾಗ್ದಾನ ಮಾಡಿದಂತೆ ನಿಮ್ಮನ್ನು ತನಗೋಸ್ಕರ ಮೀಸಲಾದ ಜನರನ್ನಾಗಿ ಸ್ಥಾಪಿಸುವನು.


ಇಸ್ರಾಯೇಲ್ಯರು ಸದಾಕಾಲವೂ ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿ; ಯೆಹೋವನೇ, ನೀನು ಅವರಿಗೆ ದೇವರಾದಿ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!


ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.


ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ಇವರು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ ಎಂದು ಬಿನ್ನೈಸಿದೆನು.


ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರೆಂದೂ ಒಡಂಬಟ್ಟಿದ್ದಾನೆ.


ಅದು ನಿನಗೆ ಬಹಳವಾಗಿ ವಿಜ್ಞಾಪಿಸುವದೋ? ನಿನ್ನ ಸಂಗಡ ಸವಿಮಾತಾಡೀತೇ?


ಸಮಸ್ತ ಇಸ್ರಾಯೇಲ್ ವಂಶವೂ ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರುವಾಸಿಯೂ ಸ್ತೋತ್ರವೂ ಮಹಿಮೆಯೂ ಆಗಿರಲೆಂದು ನಡುಕಟ್ಟು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳಲೊಲ್ಲದೆ ಹೋದರು ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು