ವಿಮೋಚನಕಾಂಡ 19:8 - ಕನ್ನಡ ಸತ್ಯವೇದವು J.V. (BSI)8 ಜನರೆಲ್ಲರೂ - ಯೆಹೋವನು ಹೇಳಿದಂತೆಯೇ ಮಾಡುವೆವು ಎಂದು ಒಗ್ಗಟ್ಟಾಗಿ ಪ್ರತ್ಯುತ್ತರ ಕೊಡಲಾಗಿ ಮೋಶೆ ಯೆಹೋವನ ಬಳಿಗೆ ಹೋಗಿ ಅವರ ಮಾತುಗಳನ್ನು ಆತನಿಗೆ ಅರಿಕೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಜನರೆಲ್ಲರೂ ಒಟ್ಟಾಗಿ ಮಾತಾಡಿದರು. “ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು” ಎಂದು ಅವರು ಅರಿಕೆಮಾಡಿದರು. ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಜನರೆಲ್ಲಾ ಒಂದಾಗಿ ಉತ್ತರಕೊಟ್ಟು, “ಯೆಹೋವ ದೇವರು ಹೇಳಿದ್ದನ್ನೆಲ್ಲಾ ಮಾಡುತ್ತೇವೆ,” ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ಹೇಳಿದನು. ಅಧ್ಯಾಯವನ್ನು ನೋಡಿ |