Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:9 - ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:9
25 ತಿಳಿವುಗಳ ಹೋಲಿಕೆ  

ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗುವಾಗ ಆ ಬೆಟ್ಟದ ಮೇಲೆ ಗುಡುಗೂ ವಿುಂಚೂ ಕಾರ್ಮುಗಿಲೂ ತುತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.


ಹೀಗೆ ಮಾತಾಡುತ್ತಿರುವಾಗಲೇ ಕಾಂತಿಯುಳ್ಳ ಮೋಡವು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನನ್ನು ನಾನು ಮೆಚ್ಚಿದ್ದೇನೆ; ಈತನ ಮಾತನ್ನು ಕೇಳಿರಿ ಎಂಬ ಆಕಾಶವಾಣಿ ಆಯಿತು.


ಮುಗಿಲೂ ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ನೀತಿನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.


ಜನರು ದೂರದಲ್ಲಿ ನಿಂತಿದ್ದರು; ಮೋಶೆಯೋ ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಸೇರಿದನು.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ಅಷ್ಟರಲ್ಲಿ ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿಂದ - ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಆಕಾಶವಾಣಿ ಆಯಿತು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ತರುವಾಯ ಸೊಲೊಮೋನನು - ಯೆಹೋವನೇ ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;


ತರುವಾಯ ಸೊಲೊಮೋನನು - ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;


ಆಗ ಯೆಹೋವನು ಅವನಿಗೆ - ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನಿನಗೆ ಕಾಣಿಸಿದ್ದು ನಿಜ ಎಂಬದನ್ನು ನಂಬುವರು ಎಂದು ಹೇಳಿದನು.


ಯೆಹೋವನು ತಮ್ಮನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತೆಗೆದುಕೊಂಡನೆಂಬದನ್ನು ಇಸ್ರಾಯೇಲ್ಯರು ಕೇಳಿದಾಗ ತಲೆಬಾಗಿ ನಮಸ್ಕರಿಸಿದರು.


ಆಗ ಯೆಹೋವನು ಮೇಘದಿಂದ ಆವರಿಸಲ್ಪಟ್ಟವನಾಗಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ನಾಮವನ್ನು ಪ್ರಕಟಿಸಿದನು.


ಆ ಮೂವರು ಬಂದಾಗ ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತು ಆರೋನ್ ವಿುರ್ಯಾಮರನ್ನು ಹತ್ತಿರಕ್ಕೆ ಕರೆದನು.


ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.


ಆ ಸಂಗತಿಗಳು ಯಾವವಂದರೆ - ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ - ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂವಿುಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ ಎಂದು ಹೇಳಿದ ದಿನದ ವಿಷಯಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು