Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:18 - ಕನ್ನಡ ಸತ್ಯವೇದವು J.V. (BSI)

18 ತರುವಾಯ ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು - ನೀವು ಈ ಹೊತ್ತು ಬೇಗ ಬಂದಿರಿ, ಇದು ಹೇಗೆ ಎಂದು ಕೇಳಲಾಗಿ ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹುಡುಗಿಯರು ತಮ್ಮ ತಂದೆ ರೆಗೂವೇಲನ ಬಳಿಗೆ ಹಿಂದಿರುಗಿದಾಗ ಅವನು, “ಈ ಹೊತ್ತು ಬಲುಬೇಗ ಬಂದು ಇದ್ದೀರಿ, ಏನು ಕಾರಣ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಮರಳಿಹೋದರು. ಅವರ ತಂದೆ, “ಈ ದಿನ ನೀವು ಬಹುಬೇಗನೆ ಮನೆಗೆ ಬಂದಿದ್ದೀರಲ್ಲಾ!” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹುಡುಗಿಯರು ತಮ್ಮ ತಂದೆ ರೆಯೂವೇಲನ ಬಳಿಗೆ ಬಂದಾಗ, ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:18
7 ತಿಳಿವುಗಳ ಹೋಲಿಕೆ  

ಮೋಶೆ ತನ್ನ ಮಾವನಾಗಿರುವ ವಿುದ್ಯಾನ್ಯರ ಆಚಾರ್ಯನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರುವಾಗ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡಿಸಿಕೊಂಡು ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಮೋಶೆ ತನ್ನ ಮಾವನಾಗಿದ್ದ ವಿುದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ - ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲ್ಯರಿಗೆ ಮೇಲನ್ನುಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದದರಿಂದ ನೀನು ನಮ್ಮ ಜೊತೆಯಲ್ಲಿ ಬಾ; ನವ್ಮಿುಂದ ನಿನಗೂ ಮೇಲುಂಟಾಗುವದೆಂದು ಹೇಳಿದನು.


ಆಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು - ಅಪ್ಪಣೆಯಾದರೆ ನಾನು ಐಗುಪ್ತದೇಶದಲ್ಲಿರುವ ಸ್ವಜನರ ಬಳಿಗೆ ತಿರಿಗಿ ಹೋಗಿ ಅವರು ಜೀವದಿಂದಿದ್ದಾರೋ ಏನೋ ನೋಡುವೆನು ಎಂಬದಾಗಿ ಅವನಿಗೆ ಹೇಳಲು ಇತ್ರೋನನು - ನೀನು ಹೋಗಿ ಬರಬಹುದು ಅಂದನು.


ಅಶುದ್ಧನಾಗಿ ದೋಷಪರಿಹಾರಮಾಡಿಕೊಳ್ಳದವನು ಯೆಹೋವನ ದೇವಸ್ಥಾನವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


ಐಗುಪ್ತ್ಯನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಗೆ ತಪ್ಪಿಸಿದನು; ಇಷ್ಟು ಮಾತ್ರವಲ್ಲದೆ ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು ಅಂದರು.


ಅವರು - ಅವನೆಲ್ಲಿದ್ದಾನೆ ಎಂದು ಅವನನ್ನು ಕೇಳಿದ್ದಕ್ಕೆ ಅವನು - ನನಗೆ ಗೊತ್ತಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು