Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 2:7 - ಕನ್ನಡ ಸತ್ಯವೇದವು J.V. (BSI)

7 ಆಗಲೇ ಅದರ ಅಕ್ಕ ಬಂದು ಫರೋಹನ ಕುಮಾರ್ತೆಗೆ - ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಲೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗಲೇ ಮಗುವಿನ ಅಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಮಗುವಿನ ಅಕ್ಕ ಬಂದು, “ನಿಮ್ಮ ಪರವಾಗಿ ಈ ಕೂಸನ್ನು ಮೊಲೆಕೊಟ್ಟು ಸಾಕಲು ಹಿಬ್ರಿಯ ಮಹಿಳೆಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೇ?” ಎಂದು ಫರೋಹನ ಪುತ್ರಿಯನ್ನು ವಿಚಾರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮಗುವಿನ ಅಕ್ಕ ಆಕೆಯ ಬಳಿಗೆ ಬಂದು, “ಮಗುವಿಗೆ ಹಾಲು ಕುಡಿಸಲು ಒಬ್ಬ ಇಬ್ರಿಯ ಸ್ತ್ರೀಯನ್ನು ಕರೆದುಕೊಂಡು ಬರಲೇ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಮಗುವಿನ ಅಕ್ಕ ಫರೋಹನ ಮಗಳಿಗೆ, “ನಾನು ಹೋಗಿ ಈ ಕೂಸಿಗೆ ಹಾಲು ಕೊಟ್ಟು ಸಾಕುವುದಕ್ಕೆ ಹಿಬ್ರಿಯ ಸ್ತ್ರೀಯರಿಂದ ಒಬ್ಬ ದಾದಿಯನ್ನು ನಿನಗೋಸ್ಕರ ಕರೆದುಕೊಂಡು ಬರಲೋ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 2:7
6 ತಿಳಿವುಗಳ ಹೋಲಿಕೆ  

ಕೂಸಿಗೆ ಏನಾಗುವದೆಂದು ತಿಳುಕೊಳ್ಳುವದಕ್ಕೆ ಅದರ ಅಕ್ಕನು ಸ್ವಲ್ಪದೂರದಲ್ಲಿ ನಿಂತುಕೊಂಡಳು.


ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿ ಯಾರಂದರೆ ಐಗುಪ್ತದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದಳು. ಈಕೆಯಲ್ಲಿ ಅಮ್ರಾಮನಿಂದ ಆರೋನನೂ ಮೋಶೆಯೂ ಇವರ ಅಕ್ಕನಾದ ವಿುರ್ಯಾಮಳೂ ಹುಟ್ಟಿದರು.


ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಅದರ ನಿವಿುತ್ತ ವಿುರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತಾಡುವವರಾಗಿ -


ಆರೋನನ ಅಕ್ಕನಾದ ವಿುರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೋಗುತ್ತಿರಲು


ಅದನ್ನು ತೆರೆದು ನೋಡುವಾಗ ಆಹಾ, ಅಳುವ ಕೂಸು. ಆಕೆ ಅದರ ಮೇಲೆ ಕನಿಕರಪಟ್ಟು - ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದೆಂದು ಹೇಳಿದಳು.


ಫರೋಹನ ಕುಮಾರ್ತೆ- ಹಾಗೇ ಮಾಡು ಅಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರತಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು