ವಿಮೋಚನಕಾಂಡ 2:9 - ಕನ್ನಡ ಸತ್ಯವೇದವು J.V. (BSI)9 ಫರೋಹನ ಕುಮಾರ್ತೆ ಅವಳಿಗೆ - ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಸಾಕಮ್ಮಾ; ನಾನೇ ನಿನಗೆ ಸಂಬಳವನ್ನು ಕೊಡುವೆನು ಎಂದು ಹೇಳಲಾಗಿ ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಸಾಕಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಫರೋಹನ ಮಗಳು ಮಗುವಿನ ತಾಯಿಗೆ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಹಾಲುಕೊಟ್ಟು ಸಾಕಬೇಕು. ನಾನು ನಿನಗೆ ಸಂಬಳವನ್ನು ಕೊಡುವೆನು” ಎಂದು ಹೇಳಿದಳು. ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವಳಿಗೆ ಆ ರಾಜಪುತ್ರಿ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನ್ನ ಪರವಾಗಿ ಸಾಕು. ನಾನೇ ನಿನಗೆ ಸಂಬಳವನ್ನು ಕೊಡುತ್ತೇನೆ,” ಎಂದಳು. ಅಂತೆಯೇ ಆ ಮಹಿಳೆ ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ರಾಜನ ಮಗಳು ತಾಯಿಗೆ, “ಈ ಮಗುವಿಗೆ ಹಾಲು ಕುಡಿಸಿ ನೋಡಿಕೊ, ನಾನು ನಿನಗೆ ಸಂಬಳ ಕೊಡುವೆನು” ಎಂದು ಹೇಳಿದಳು. ಆದ್ದರಿಂದ ಆ ಸ್ತ್ರೀ ತನ್ನ ಮಗುವನ್ನು ತೆಗೆದುಕೊಂಡು ಸಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಫರೋಹನ ಮಗಳು ಆಕೆಗೆ, “ಈ ಮಗುವನ್ನು ತೆಗೆದುಕೊಂಡುಹೋಗಿ, ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು,” ಎಂದಳು. ಆಗ ಆ ಸ್ತ್ರೀಯು ಕೂಸನ್ನು ತೆಗೆದುಕೊಂಡುಹೋಗಿ ಸಾಕಿದಳು. ಅಧ್ಯಾಯವನ್ನು ನೋಡಿ |