Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:1 - ಕನ್ನಡ ಸತ್ಯವೇದವು J.V. (BSI)

1 ದೇವರು ಮುಂದಣ ಆಜ್ಞೆಗಳನ್ನೆಲ್ಲಾ ಕೊಟ್ಟನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರು ಕೊಟ್ಟ ಆಜ್ಞೆಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಳಿಕ ಯೆಹೋವನು ಈ ದಶಾಜ್ಞೆಗಳನ್ನು ಅವರಿಗೆ ಕೊಟ್ಟನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:1
11 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು; ಆಮೇಲೆ ಇನ್ನು ಮಾತಾಡಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.


ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತಾಡಲಾಗಿ


ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.


ಅವನೇ ಸೀನಾಯಿಬೆಟ್ಟದಲ್ಲಿ ತನ್ನೊಡನೆ ಮಾತಾಡಿದ ದೂತನಿಗೂ ನಮ್ಮ ಪಿತೃಗಳಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಮಧ್ಯಸ್ಥನಾಗಿದ್ದು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.


ದೇವರು ಬೆಂಕಿಯ ಜ್ವಾಲೆಯೊಳಗಿಂದ ಮಾತಾಡಿದ ಸ್ವರವು ನಿಮಗೆ ಕೇಳಿಸಿತಲ್ಲಾ; ಬೇರೆ ಯಾವ ಜನರಾದರೂ ದೇವರ ಸ್ವರವನ್ನು ಕೇಳಿ ಬದುಕಿದ್ದುಂಟೋ?


ದೇವದೂತರ ಮೂಲಕ ನೇಮಕವಾದ ಧರ್ಮಶಾಸ್ತ್ರವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವದಿಲ್ಲ ಎಂದು ಹೇಳಿದನು.


ಮೋಶೆ ಜನರ ಬಳಿಗೆ ಇಳಿದು ಹೋಗಿ [ಆ ಮಾತುಗಳನ್ನು] ಅವರಿಗೆ ತಿಳಿಸಿದನು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೇಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಿ ಅವರಿಗೆ ನೀತಿನಿಯಮಗಳನ್ನೂ ಯಥಾರ್ಥ ಧರ್ಮೋಪದೇಶವನ್ನೂ ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದಿ.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು