Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:15 - ಕನ್ನಡ ಸತ್ಯವೇದವು J.V. (BSI)

15 ಕದಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಕದಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕದಿಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀವು ಕದಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕದಿಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:15
25 ತಿಳಿವುಗಳ ಹೋಲಿಕೆ  

ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು - ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.


ಮತ್ತೊಬ್ಬನನ್ನು ಬಲಾತ್ಕರಿಸಬಾರದು; ಅವನ ಸೊತ್ತನ್ನು ಅಪಹರಿಸಬಾರದು. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ಅವನು - ಅವು ಯಾವವು ಎಂದು ಕೇಳಲು ಯೇಸು - ನರಹತ್ಯಮಾಡಬಾರದು; ವ್ಯಭಿಚಾರಮಾಡಬಾರದು; ಕದಿಯಬಾರದು; ಸುಳ್ಳುಸಾಕ್ಷಿ ಹೇಳಬಾರದು; ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು;


ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.


ಅವನು ಬಡವರಿಗೋಸ್ಕರ ಚಿಂತಿಸಿ ಇದನ್ನು ಹೇಳಲಿಲ್ಲ; ಅವನು ಕಳ್ಳನಾಗಿದ್ದು ತನ್ನ ವಶದಲ್ಲಿದ್ದ ಅವರ ಹಣದ ಚೀಲದಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದದರಿಂದಲೇ ಹೇಳಿದನು.


ಮೋಸದ ತ್ರಾಸು ಯೆಹೋವನಿಗೆ ಅಸಹ್ಯ; ನ್ಯಾಯದ ತೂಕ ಆತನಿಗೆ ಸಂತೋಷ.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲ್ಯನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಮಾರಿಬಿಟ್ಟದ್ದಾಗಲಿ ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಅವರಿಗೆ - ನನ್ನ ಆಲಯವು ಪ್ರಾರ್ಥನಾಲಯವೆನಿಸಿಕೊಳ್ಳುವದು ಎಂದು ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತೀರಿ ಎಂದು ಹೇಳಿದನು.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ಮನುಷ್ಯನನ್ನು ಕದ್ದವನಿಗೆ ಅವನನ್ನು ಮಾರಿದರೂ ತನ್ನಲ್ಲಿಯೇ ಇಟ್ಟುಕೊಂಡರೂ ಮರಣಶಿಕ್ಷೆಯಾಗಬೇಕು.


ಹೇಗಂದರೆ ಮನಸ್ಸಿನೊಳಗಿಂದ ಕೆಟ್ಟ ಆಲೋಚನೆ ಕೊಲೆ ಹಾದರ ಸೂಳೆಗಾರಿಕೆ ಕಳ್ಳತನ ಸುಳ್ಳುಸಾಕ್ಷಿ ಬೈಗಳು ಹೊರಟು ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು