Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:2 - ಕನ್ನಡ ಸತ್ಯವೇದವು J.V. (BSI)

2 ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:2
50 ತಿಳಿವುಗಳ ಹೋಲಿಕೆ  

ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ನಾನಾದರೋ ನೀನು ಐಗುಪ್ತದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ. ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ವಿನಹ ಯಾವ ರಕ್ಷಕನೂ ಇಲ್ಲ.


ನೀವು ಐಗುಪ್ತ್ಯರಿಗೆ ದಾಸರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದೆನಲ್ಲವೇ.


ನಿಮ್ಮನ್ನು ಐಗುಪ್ತದಿಂದ ಕರತಂದ ಯೆಹೋವನೆಂಬ ನಾನೇ ನಿಮ್ಮ ದೇವರು. ಅಗಲವಾಗಿ ಬಾಯಿದೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ತಕ್ಕಡಿ, ತೂಕದ ಕಲ್ಲು, ಕೊಳಗ, ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು.


ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ಐಗುಪ್ತದೇಶದಲ್ಲಿ ನೀವೂ ದಾಸತ್ವದಲ್ಲಿದ್ದದ್ದನ್ನೂ ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂಬದನ್ನು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದಾಗ ಇಸ್ರಾಯೇಲ್ಯರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವದು. ನಾನು ನಿಮ್ಮ ದೇವರಾದ ಯೆಹೋವನು.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನೆಂಬದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.


ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ಈ ವಿಷಯದಲ್ಲಿ ಯೆಹೂದ್ಯನಿಗೂ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತ; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವವನಾಗಿದ್ದಾನೆ.


ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು. ದೇವರು ಒಬ್ಬನೇ ಆಗಿರಲಾಗಿ ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ.


ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಕಲ ಗೋತ್ರಗಳವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ಆದದರಿಂದ ಅವನ ದೇವರಾದ ಯೆಹೋವನು ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು; ಅರಾಮ್ಯರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು ಅವನಿಂದಲೂ ಪೂರ್ಣವಾಗಿ ಅಪಜಯಹೊಂದಿದನು.


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ನೀನು ಬಿಡುಗಡೆ ಮಾಡಿದ ಪ್ರಜೆಯನ್ನೋ ಪ್ರೀತಿಯಿಂದ ನಡಿಸಿಕೊಂಡು ನಿನ್ನ ಪರಿಶುದ್ಧ ನಿವಾಸಸ್ಥಾನದ ತನಕ ನಿನ್ನ ಶಕ್ತಿಯಿಂದ ಬರಮಾಡಿದಿ.


ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು.


ದೇವರು ಮುಂದಣ ಆಜ್ಞೆಗಳನ್ನೆಲ್ಲಾ ಕೊಟ್ಟನು -


ತಮ್ಮ ಮಧ್ಯದಲ್ಲಿ ವಾಸವಾಗುವದಕ್ಕಾಗಿಯೇ ತಮ್ಮನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಯೆಹೋವನು ನಾನೇ ಎಂದು ಅವರು ತಿಳುಕೊಳ್ಳುವರು. ನಾನು ಅವರ ದೇವರಾದ ಯೆಹೋವನೇ.


ನಿಮ್ಮ ದೇವರಾಗಿರುವದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನೇ ನಾನು; ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.


ಯೆಹೋವನ ದೂತನು ಗಿಲ್ಗಾಲಿನಿಂದ ಬೋಕೀವಿುಗೆ ಬಂದು ಇಸ್ರಾಯೇಲ್ಯರಿಗೆ - ನಾನು ನಿಮ್ಮನ್ನು ಐಗುಪ್ತದಿಂದ ಬರಮಾಡಿ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಕರತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವದಿಲ್ಲವೆಂದು ನಾನು ಮಾತು ಕೊಟ್ಟಾಗ -


ಯೆಹೋವನೆಂಬ ನಾನು ನಿನ್ನ ದೇವರಾಗಿದ್ದೇನಷ್ಟೆ, ಇಸ್ರಾಯೇಲ್ಯರ ಸದಮಲಸ್ವಾವಿುಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನಗೆ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ಯೆಹೋವನು ಹೀಗನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ಜನರು ಇಸ್ರಾಯೇಲ್ಯರನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬದಾಗಿ ಪ್ರಮಾಣಮಾಡುವದನ್ನು ಬಿಟ್ಟು


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪಿತೃಗಳನ್ನು ನಾನು ಅಲ್ಲಿಂದ ಕರತಂದಾಗ -


ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಟುಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂಬದಾಗಿ ಅವರನ್ನು ಎಚ್ಚರಿಸಿದೆನು.


ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನಡಿಸಿರಿ;


[ಇಸ್ರಾಯೇಲ್ಯರೇ,] ಅಮೋರಿಯರ ದೇಶವನ್ನು ನಿಮಗೆ ದೊರಕಿಸಬೇಕೆಂದು ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿಕೊಂಡು ಬಂದೆನು,


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವದಕ್ಕೂ ನಿಮಗೆ ಕಾನಾನ್‍ದೇಶವನ್ನು ಕೊಡುವದಕ್ಕೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದವನೇ.


ಅವರು ನನಗೇ ದಾಸರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ವಿಕ್ರಯಿಸಬಾರದು.


ಯಾಕಂದರೆ ಇಸ್ರಾಯೇಲ್ಯರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು - ಯೆಹೋವನೇ ದೇವರು, ಯೆಹೋವನೇ ದೇವರು ಎಂದು ಕೂಗಿದರು.


ಇಸ್ರಾಯೇಲ್ಯರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ; ಹೇಗಂದರೆ - ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.


ಯೆಹೋವನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು;


ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.


ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲ್ಯರು ನನಗೆ ಸಮ್ಮತಿಸಲಿಲ್ಲ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ದಿವಸದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು ಯಾಕೋಬ ಸಂತಾನದವರಿಗೆ ಮಾತುಕೊಟ್ಟು ನಾನು ನಿಮ್ಮ ದೇವರಾದ ಯೆಹೋವನು ಎಂದು ಐಗುಪ್ತ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆನೋ ಆ ದಿವಸದಲ್ಲಿ ನಾನು ಅವರಿಗೆ -


ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯ ದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು