ವಿಮೋಚನಕಾಂಡ 20:25 - ಕನ್ನಡ ಸತ್ಯವೇದವು J.V. (BSI)25 ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು; ಅದಕ್ಕೆ ಉಳಿ ಮುಂತಾದದ್ದನ್ನು ಉಪಯೋಗಿಸಿದರೆ ಅದು ಅಪರಿಶುದ್ಧವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀವು ನನಗಾಗಿ ಕಲ್ಲಿನಿಂದ ಯಜ್ಞವೇದಿಯನ್ನು ಕಟ್ಟುವುದಾದರೆ, ಅದನ್ನು ಕೆತ್ತಿರುವ ಕಲ್ಲುಗಳಿಂದ ಕಟ್ಟಬಾರದು. ಏಕೆಂದರೆ ಉಳಿ, ಮುಂತಾದುದನ್ನು ಅದರ ಮೇಲೆ ಉಪಯೋಗಿಸಿದರೆ ಅದು ಅಪವಿತ್ರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನೀವು ಯಜ್ಞವೇದಿಕೆಯನ್ನು ಕಲ್ಲುಗಳಿಂದ ಕಟ್ಟಬೇಕೆಂದಿದ್ದರೆ, ಉಳಿಯಿಂದ ಕೆತ್ತಿದ ಕಲ್ಲುಗಳನ್ನು ಉಪಯೋಗಿಸಬೇಡಿರಿ. ಅಂಥ ಕಲ್ಲುಗಳನ್ನು ಉಪಯೋಗಿಸಿದರೆ, ಯಜ್ಞವೇದಿಕೆಯು ಅಪವಿತ್ರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಬಲಿಪೀಠವನ್ನು ಕಲ್ಲಿನಿಂದ ಮಾಡಿದರೆ, ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಏಕೆಂದರೆ ಉಳಿಯನ್ನು ಅದರ ಮೇಲೆ ಉಪಯೋಗಿಸಿದರೆ, ಅದನ್ನು ಅಪವಿತ್ರಮಾಡಿದ ಹಾಗಾಗುತ್ತದೆ. ಅಧ್ಯಾಯವನ್ನು ನೋಡಿ |