Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:5 - ಕನ್ನಡ ಸತ್ಯವೇದವು J.V. (BSI)

5 ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:5
65 ತಿಳಿವುಗಳ ಹೋಲಿಕೆ  

ಯೆಹೋವನು ದೀರ್ಘಶಾಂತನು, ಬಹು ಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷವಿುಸುವವನು; ಆದಾಗ್ಯೂ [ಅಪರಾಧಿಗಳನ್ನು] ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವನು ಎಂದು ಹೇಳಿದಿಯಲ್ಲಾ. ಈ ಮಾತಿಗೆ ದೃಷ್ಟಾಂತವನ್ನು ಕೊಟ್ಟು ನಿನ್ನ ಮಹಿಮೆಯನ್ನು ದೃಢಪಡಿಸಬೇಕು.


ಅವುಗಳಿಗೆ ಅಡ್ಡ ಬೀಳಲೂಬಾರದು, ಪೂಜೆಮಾಡಲೂಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ.


ಸ್ವಗೌರವವನ್ನು ಕಾಪಾಡಿಕೊಳ್ಳುವವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡ ಬೀಳಬಾರದು.


ಆಗ ಯೆಹೋಶುವನು ಅವರಿಗೆ - ನೀವು ಯೆಹೋವನನ್ನು ಸೇವಿಸಲಾರಿರಿ. ಆತನು ಪರಿಶುದ್ಧನೂ ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದವನೂ ಆಗಿರುವ ದೇವರು. ಆತನು ನಿಮ್ಮ ದ್ರೋಹಾಪರಾಧಗಳನ್ನು ಕ್ಷವಿುಸುವದಿಲ್ಲ.


ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.


ಉಳಿದಿರುವ ಈ ಜನಾಂಗಗಳ ಜೊತೆಯಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಲೂ ಪ್ರಮಾಣಮಾಡಲೂಬಾರದು, ಅವುಗಳಿಗೆ ಅಡ್ಡಬಿದ್ದು ಸೇವಿಸಲೂಬಾರದು.


ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂವಿುಯ ಮೇಲೆ ಉಳಿಯದಂತೆ ನಾಶಮಾಡಾನು.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು, ಆತನು ಮುಯ್ಯಿತೀರಿಸುವವನು; ಹೌದು, ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ, ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ನೀನು ಸಾವಿರಾರು ತಲೆಗಳವರೆಗೆ ದಯೆತೋರಿಸುವವನೂ ತಂದೆಗಳ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವನೂ ಆಗಿದ್ದೀ; ನೀನು ಮಹಾ ಪರಾಕ್ರವಿುಯಾದ ದೇವರು; ಸೇನಾಧೀಶ್ವರನಾದ ಯೆಹೋವನೆಂಬದು ನಿನ್ನ ನಾಮಧೇಯ;


ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಾಲ್ವತ್ತು ವರುಷ ಅರಣ್ಯವಾಸಿಗಳಾಗಿರಬೇಕು.


ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹುವಾಗಿ ಕುಗ್ಗಿಹೋಗಿದ್ದೇವೆ.


ಅವರ ದೇವತೆಗಳನ್ನು ನೀವು ನಮಸ್ಕರಿಸಲೂಬಾರದು, ಪೂಜಿಸಲೂಬಾರದು; ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶನ ಮಾಡಬೇಕು.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.


ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ


ಆದಕಾರಣ ನಾನು ನಿಮ್ಮೊಂದಿಗೆ ಇನ್ನೂ ವ್ಯಾಜ್ಯವಾಡುವೆನು; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು ಎಂದು ಯೆಹೋವನು ಅನ್ನುತ್ತಾನೆ.


ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು, ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸ ಸುಟ್ಟು ತಿಂದೆನಲ್ಲಾ; ವಿುಕ್ಕದ್ದನ್ನು ನಾನು ಬೊಂಬೆ ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ, ಅಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.


ಅದು ಸೌದೆಗಾಗುವದು; ಅವನು ಸ್ವಲ್ಪ ತೆಗೆದು ಕಾಯಿಸಿಕೊಳ್ಳುವನು, ಉರಿಸಿ ರೊಟ್ಟಿಸುಡುವನು; ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ಬೊಂಬೆ ಕೆತ್ತಿ ಅಡ್ಡಬೀಳುವನು.


ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.


ಅವನ ಮಕ್ಕಳು ನಿರಾಶ್ರಯರಾಗಿ ನ್ಯಾಯಸ್ಥಾನದಲ್ಲಿ ಸೋತುಹೋಗುವರು. ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.


ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.


ಯೆಹೋವನು ಇಸ್ರಾಯೇಲ್ಯರಿಗೆ ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂ ಬಾರದು, ಸೇವೆಮಾಡಲೂ ಯಜ್ಞವರ್ಪಿಸಲೂಬಾರದು.


ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು ಎಂದು ಹೇಳಿದನು.


ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.


ದಾವೀದನ ಕಾಲದಲ್ಲಿ ಮೂರು ವರುಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು - ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ ಅವನ ಮನೆಯವರ ಮೇಲೆಯೂ ರಕ್ತಾಪರಾಧವಿರುತ್ತದೆ ಎಂದು ಉತ್ತರಕೊಟ್ಟನು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ತನ್ನನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನುಂಟುಮಾಡುವವನಾಗಿಯೂ ಇದ್ದಾನೆಂದು ತಿಳಿದುಕೊಳ್ಳಿರಿ. ಹಗೆಯವರ ವಿಷಯದಲ್ಲಿ ತಡಮಾಡದೆ ಆಗಲೇ ಮುಯ್ಯಿತೀರಿಸುವನು.


ನೀವು ನಿಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ನಾನಂತೂ ಆ ಮನುಷ್ಯನಿಗೂ ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆಮಾಡಿದವರೆಲ್ಲರನ್ನೂ ಕುಲದಿಂದ ತೆಗೆದುಹಾಕುವೆನು.


ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ.


ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.


ನೀನು ನನಗೆ ಸಾಷ್ಟಾಂಗನಮಸ್ಕಾರ ಮಾಡಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು ಅಂದನು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.


ದೇವರು ದುಷ್ಟನ ಪಾಪಫಲವನ್ನು ಅವನ ಮಕ್ಕಳಿಗಾಗಿ ಇಟ್ಟಿದ್ದಾನೆ [ಅನ್ನುತ್ತೀರೋ?] ಆ ಫಲವನ್ನು ಅನುಭವಿಸುವ ಹಾಗೆ ದೇವರು ಅವನಿಗೇನೆ ಕೊಟ್ಟುಬಿಡಲಿ.


ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ ತಾನು ತೆಗೆದುಕೊಂಡು ಬಂದಿದ್ದ ಸೇಯೀರನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ನಿಲ್ಲಿಸಿ ಅವುಗಳಿಗೆ ಅಡ್ಡಬಿದ್ದು ಧೂಪಹಾಕುತ್ತಿದ್ದನು.


ಆ ಜನಾಂಗಗಳವರು ಯೆಹೋವ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿರುತ್ತಾರೆ.


ಅಂಥ ನ್ಯಾಯಸ್ಥಾಪಕರು ತೀರಿಹೋದನಂತರ ಇಸ್ರಾಯೇಲ್ಯರು ತಿರುಗಿಕೊಂಡು ತಮ್ಮ ಹಿರಿಯರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ ಸೇವಿಸಿ ಅವುಗಳಿಗೆ ಅಡ್ಡಬಿದ್ದರು; ಅವರು ಈ ತಮ್ಮ ದುರ್ಮಾರ್ಗವನ್ನೂ ಮೊಂಡತನವನ್ನೂ ಬಿಡಲೇ ಇಲ್ಲ.


ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.


ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ ನ್ಯಾಯವನ್ನು ಸ್ಥಾಪಿಸುವದಕ್ಕೆ ಮುಂಗೊಂಡಾಗ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ಆದರೆ ನೀವು - ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವದಿಲ್ಲ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡಿಸಿ ನನ್ನ ವಿಧಿಗಳನ್ನೆಲ್ಲಾ ಕೈಕೊಂಡು ಆಚರಿಸಿದರೆ ಬಾಳೇ ಬಾಳುವನು.


ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಟುಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂಬದಾಗಿ ಅವರನ್ನು ಎಚ್ಚರಿಸಿದೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಾಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆತೋರಿಸುವೆನು;


ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷವಿುಸಲಿ; ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು ಅನ್ನಲು


ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು.


ಆದರೆ ನೀವು ದ್ರೋಹಿಗಳಾಗಿ ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನು ಹಿಂಬಾಲಿಸಿ


ತಂದೆಗಳು ಹುಳಿದ್ರಾಕ್ಷೆಯನ್ನು ತಿಂದರು, ಮಕ್ಕಳ ಹಲ್ಲುಗಳು ಚಳಿತುಹೋಗಿವೆ ಎಂಬ ಗಾದೆಯನ್ನು ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಹೇಳುವದೇಕೆ?


ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದುತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು