Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:9 - ಕನ್ನಡ ಸತ್ಯವೇದವು J.V. (BSI)

9 ಆರು ದಿವಸಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:9
10 ತಿಳಿವುಗಳ ಹೋಲಿಕೆ  

ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.


ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಉಳುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.


ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳೂ ಕತ್ತೆಗಳೂ ದಾಸದಾಸಿಯರೂ ಪರದೇಶಸ್ಥರೂ ವಿಶ್ರವಿುಸಿಕೊಳ್ಳಲಿ.


ಆರು ದಿನಗಳಲ್ಲಿ ನೀವು ಕೆಲಸವನ್ನು ನಡಿಸಬೇಕು; ಏಳನೆಯ ದಿನವು ಯಾವ ಕೆಲಸವನ್ನೂ ಮಾಡಕೂಡದ ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನೂ ಮಾಡಕೂಡದು. ನಿಮ್ಮ ಎಲ್ಲಾ ನಿವಾಸಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


ಆರು ದಿನಗಳು ಕೆಲಸನಡೆಯಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾದ್ದರಿಂದ ಅದರಲ್ಲಿ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು;


ಆರು ದಿವಸ ಅದನ್ನು ಕೂಡಿಸಬಹುದು; ಏಳನೆಯ ದಿನ ಸಬ್ಬತಾದದರಿಂದ ಅದು ದೊರೆಯುವದೇ ಇಲ್ಲ ಎಂದು ಹೇಳಿದನು. ಹಾಗೆಯೇ ಆಯಿತು.


ಆರು ದಿನಗಳು ಕೆಲಸಮಾಡಬೇಕು; ಏಳನೆಯ ದಿವಸ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ; ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು;


ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು; ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.


ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವಾರದೊಳಗೆ ಕೆಲಸನಡೆಯುವ ಆರು ದಿವಸಗಳಲ್ಲಿ ಒಳಗಣ ಪ್ರಾಕಾರದ ಮೂಡಲ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲಿಯೂ ಅಮಾವಾಸ್ಯೆಯಲ್ಲಿಯೂ ತೆರೆದಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು