Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:14 - ಕನ್ನಡ ಸತ್ಯವೇದವು J.V. (BSI)

14 ಕೊಲ್ಲಬೇಕೆಂಬ ಉದ್ದೇಶದಿಂದಲೇ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಯಜ್ಞವೇದಿಯ ಬಳಿಯಿಂದಲೂ ಎಳೆದು ಅವನಿಗೆ ಮರಣಶಿಕ್ಷೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಒಬ್ಬನು ಮತ್ತೊಬ್ಬನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಬಲಿಪೀಠದಿಂದ ದೂರ ತೆಗೆದುಕೊಂಡುಹೋಗಿ ಕೊಂದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:14
18 ತಿಳಿವುಗಳ ಹೋಲಿಕೆ  

ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ;


ಮುಖ್ಯವಾಗಿ ಬಂಡುತನವನ್ನು ಆಶಿಸಿ ಶರೀರಭಾವಾನುಸಾರ ನಡೆದು ಪ್ರಭುತ್ವ ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಫಾಪರರಾಗಿದ್ದು ಮಹಾಪದವಿಯವರನ್ನು ನಿರ್ಭಯವಾಗಿ ದೂಷಿಸುತ್ತಾರೆ.


ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.


ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ ಹೊರಗೆ ಕರಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಅವರು - ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಪ್ರವಾದಿಯು ಯೆಹೋವನ ಮಾತೆಂದು ಹೇಳಿ ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ ಅವನ ಮಾತು ಯೆಹೋವನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.


ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಯೆಹೋವನ ಆಜ್ಞೆಯನ್ನು ತಾತ್ಸಾರ ಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.


ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆದವನಿಗೆ ಮರಣಶಿಕ್ಷೆಯಾಗಬೇಕು.


ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು; ಅಂಥವನಿಗೆ ಮರಣಶಿಕ್ಷೆಯಾಗಬೇಕು.


ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು; ಅವನನ್ನು ಯಾರೂ ತಡೆಯಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು