Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:26 - ಕನ್ನಡ ಸತ್ಯವೇದವು J.V. (BSI)

26 ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟ ಪಡಿಸಿದರೆ ಆದಕ್ಕಾಗಿ ಆ ದಾಸನನ್ನು ಬಿಡುಗಡೆಯಾಗಿ ಹೋಗಗೊಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಒಬ್ಬನು ತನ್ನ ದಾಸನ ಅಥವಾ ದಾಸಿಯ ಕಣ್ಣಿಗೆ ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ ಆ ದಾಸನನ್ನು ಬಿಡುಗಡೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಯಜಮಾನನು ಗುಲಾಮನಿಗೆ ಹೊಡೆದಾಗ ಗುಲಾಮನು ಕುರುಡನಾದರೆ, ಆ ಗುಲಾಮನು ಬಿಡುಗಡೆ ಹೊಂದಿದ್ದಾನೆ. ಅವನು ತನ್ನ ಬಿಡುಗಡೆಗೆ ತನ್ನ ಕಣ್ಣನ್ನೇ ಪ್ರತಿಯಾಗಿ ಕೊಟ್ಟಿದ್ದಾನೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ, ಆ ಕಣ್ಣಿಗೋಸ್ಕರ ಅವರನ್ನು ಅವನು ಬಿಡುಗಡೆ ಮಾಡಿ ಕಳುಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:26
14 ತಿಳಿವುಗಳ ಹೋಲಿಕೆ  

ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ.


ಯಜಮಾನರೇ, ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆಯಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.


ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತೀ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವದಿಲ್ಲ.


ನೀನು ಅವರ ಅನ್ಯಾಯಬಲಾತ್ಕಾರಗಳನ್ನು ನೋಡಿಯೇ ಇದ್ದೀ; ಅವುಗಳನ್ನು ವಿಚಾರಿಸುತ್ತೀ. ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು; ದಿಕ್ಕಿಲ್ಲದವನಿಗೆ ನೀನೇ ದಿಕ್ಕು.


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.


ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿರಿ, ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಇಷ್ಟರಲ್ಲೇ ಅಪಹರಿಸಿದರು; ನಮ್ಮ ಯತ್ನವೇನೂ ಸಾಗುವದಿಲ್ಲ. ನಮ್ಮ ಹೊಲತೋಟಗಳು ಪರಾಧೀನವಾದವು ಎಂದು ಗುಣುಗುಟ್ಟಿದರು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಒಬ್ಬನು ತನ್ನ ದಾಸನನ್ನಾಗಲಿ ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಸಾಯುವಂತೆ ಮಾಡಿದರೆ ಅವನಿಗೆ ತಕ್ಕ ಶಿಕ್ಷೆ ಯಾಗಬೇಕು.


ಈ ಮೇರೆಗೆ ಪ್ರತಿದಂಡನೆಯಾಗಬೇಕು.


ದಾಸನ ಅಥವಾ ದಾಸಿಯ ಹಲ್ಲನ್ನು ಉದುರಬಡಿದರೆ ಅದಕ್ಕಾಗಿ ಆ ದಾಸನನ್ನು ಬಿಡುಗಡೆಯಾಗಿ ಹೋಗಗೊಡಿಸಬೇಕು.


ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು, ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು