Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:5 - ಕನ್ನಡ ಸತ್ಯವೇದವು J.V. (BSI)

5 ಆದರೆ ಆ ದಾಸನು - ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿ ಮಕ್ಕಳನ್ನೂ ಪ್ರೀತಿಸುತ್ತೇನಾದದರಿಂದ ಅವರನ್ನು ಅಗಲಿ ಬಿಡುಗಡೆಯಾಗಿ ಹೋಗಲೊಲ್ಲೆನೆಂದು ದೃಢವಾಗಿ ಹೇಳಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೆ ದಾಸನು, “ನಾನು ನನ್ನ ಯಜಮಾನನ್ನೂ, ನನ್ನ ಹೆಂಡತಿ ಮಕ್ಕಳನ್ನು ಪ್ರೀತಿಸುತ್ತೇನೆ. ಆದುದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ನನಗೆ ಮನಸಿಲ್ಲ” ಎಂದು ಸ್ಪಷ್ಟವಾಗಿ ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆದರೆ ಆ ಗುಲಾಮನು ತಾನು ತನ್ನ ಯಜಮಾನನನ್ನೂ ತನ್ನ ಮಡದಿ ಮಕ್ಕಳನ್ನೂ ಪ್ರೀತಿಸುತ್ತೇನೆ, ಈ ಕಾರಣ ಬಿಡುಗಡೆ ಹೊಂದಿ ಹೋಗಲು ಇಷ್ಟವಿಲ್ಲವೆಂದು ದೃಢವಾಗಿ ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದದೆ ಇಲ್ಲೇ ಇರುವೆನು’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಆದರೆ ದಾಸನು, ‘ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿಮಾಡುತ್ತೇನೆ. ಆದ್ದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,’ ಎಂದು ಸ್ವಷ್ಟವಾಗಿ ಹೇಳಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:5
5 ತಿಳಿವುಗಳ ಹೋಲಿಕೆ  

ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.


ಅವನ ಯಜಮಾನನು ಅವನಿಗೆ ಮದುವೆಮಾಡಿಸಿದ ಪಕ್ಷದಲ್ಲಿ ಆ ಹೆಂಡತಿಯಲ್ಲಿ ಗಂಡು ಇಲ್ಲವೆ ಹೆಣ್ಣು ಮಕ್ಕಳು ಹುಟ್ಟಿದ್ದರೆ ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು; ದಾಸನು ಒಂಟಿಗನಾಗಿಯೇ ಹೊರಟುಹೋಗಬೇಕು.


ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರಕೊಂಡು ಬಂದು ಕದದ ಹತ್ತಿರ ಅಥವಾ ಬಾಗಲಿನ ನಿಲುವುಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ಸಲಾಕೆಯಿಂದ ಚುಚ್ಚಬೇಕು. ಆ ಹೊತ್ತಿನಿಂದ ಇವನು ಶಾಶ್ವತವಾಗಿ ಅವನಿಗೆ ದಾಸನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು