Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:6 - ಕನ್ನಡ ಸತ್ಯವೇದವು J.V. (BSI)

6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರಕೊಂಡು ಬಂದು ಕದದ ಹತ್ತಿರ ಅಥವಾ ಬಾಗಲಿನ ನಿಲುವುಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ಸಲಾಕೆಯಿಂದ ಚುಚ್ಚಬೇಕು. ಆ ಹೊತ್ತಿನಿಂದ ಇವನು ಶಾಶ್ವತವಾಗಿ ಅವನಿಗೆ ದಾಸನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:6
24 ತಿಳಿವುಗಳ ಹೋಲಿಕೆ  

ಆ ದಿನ ಮೊದಲುಗೊಂಡು ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಲ್ಲಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು.


ಅವನು ಕೂಲಿಯವನಂತೆಯೂ ಪರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.


ಹೌದು, ನಿನ್ನ ದಾಸನ ಸಾಹಸವು ಗೊತ್ತಾಗುವದು ಅಂದನು. ಆಕೀಷನು ಅವನಿಗೆ - ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇವಿುಸಿಕೊಳ್ಳುವೆನು ಅಂದನು.


ಅದರಲ್ಲಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಕಡಿಯುವದಕ್ಕೆ ಎಲುಬು ಕೂಡಾ ವಿುಗದು.


ಅವರು ಅವನಿಗೆ - ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ ಅವರಿಗೆ ಒಳಗಾಗಿ ಒಳ್ಳೇ ಉತ್ತರಕೊಡುವದಾದರೆ ಅವರು ಯಾವಾಗಲೂ ನಿನಗೆ ಒಳಗಾಗಿರುವರು ಅಂದರು.


ದಾವೀದನ ಹೆಸರು ಸ್ವಜನರಾದ ಇಸ್ರಾಯೇಲ್ಯರಲ್ಲಿ ಅಸಹ್ಯವಾದದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.


ಮಗನು ಮೊಲೆಬಿಡುವವರೆಗೂ ನಾನು ಬರುವದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುವೆನು ಎಂದು ಹೇಳಿದಳು.


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇವಿುಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ಆ ನ್ಯಾಯಾಧಿಪತಿಗಳಿಗೆ ನಾನು ಆ ಕಾಲದಲ್ಲಿ ಅಪ್ಪಣೆಮಾಡಿ - ನೀವು ಸ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು; ಅವರು ಇಸ್ರಾಯೇಲ್ಯರೊಡನೆ ವ್ಯಾಜ್ಯವಾಡಿದರೂ ಅನ್ಯರೊಡನೆ ವ್ಯಾಜ್ಯವಾಡಿದರೂ ನೀವು ನ್ಯಾಯದ ಪ್ರಕಾರವೇ ತೀರ್ಪುಮಾಡಬೇಕು.


ಭೂವಿುಯನ್ನು ಶಾಶ್ವತವಾಗಿ ವಿಕ್ರಯಿಸಿಬಿಡಬಾರದು. ಯಾಕಂದರೆ ಆ ಭೂವಿು ನನ್ನದು; ನೀವಾದರೋ ಪರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳುಕೊಂಡವರೇ.


ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.


ಮನುಷ್ಯರು ಜಗಳವಾಡುತ್ತಿರಲಾಗಿ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದದರಿಂದ ಅವಳಿಗೆ ಗರ್ಭಸ್ರಾವವೇ ಹೊರತಾಗಿ ಬೇರೆ ಯಾವ ಹಾನಿಯೂ ಆಗದೆ ಹೋದರೆ ಹೆಂಗಸಿನ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತು ಮಾಡುತ್ತಾನೋ ಹೊಡೆದವನು ಅಷ್ಟನ್ನು ಕೊಡಬೇಕು.


ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.


ಆದರೆ ಆ ದಾಸನು - ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿ ಮಕ್ಕಳನ್ನೂ ಪ್ರೀತಿಸುತ್ತೇನಾದದರಿಂದ ಅವರನ್ನು ಅಗಲಿ ಬಿಡುಗಡೆಯಾಗಿ ಹೋಗಲೊಲ್ಲೆನೆಂದು ದೃಢವಾಗಿ ಹೇಳಿದರೆ


ಯಾವನಾದರೂ ತನ್ನ ಮಗಳನ್ನು ದಾಸಿಯಾಗುವದಕ್ಕೆ ಮಾರಿದರೆ ಪುರುಷರಾದ ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಕೂಡದು.


ಒಂದು ವೇಳೆ ಅಂಥ ದಾಸನು ನಿಮ್ಮ ಬಳಿಯಲ್ಲಿ ಸುಖವಾಗಿದ್ದು ನಿಮ್ಮನ್ನೂ ನಿಮ್ಮ ಮನೆಯವರನ್ನೂ ಪ್ರೀತಿಸಿ ತಾನು ಬಿಡುಗಡೆಯಾಗಿ ಹೋಗಲೊಲ್ಲೆನೆಂದು ಹೇಳುವ ಪಕ್ಷಕ್ಕೆ ನೀವು ಶಲಾಕಿಯಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು