Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:7 - ಕನ್ನಡ ಸತ್ಯವೇದವು J.V. (BSI)

7 ಯಾವನಾದರೂ ತನ್ನ ಮಗಳನ್ನು ದಾಸಿಯಾಗುವದಕ್ಕೆ ಮಾರಿದರೆ ಪುರುಷರಾದ ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಯಾರಾದರು ತನ್ನ ಮಗಳನ್ನು ದಾಸಿಯಾಗುವುದಕ್ಕೆ ಮಾರಿದರೆ ಗಂಡು ಗುಲಾಮರು ಬಿಡುಗಡೆಯಾಗಿ ಹೋಗುವಂತೆ ಅವಳು ಬಿಡುಗಡೆಯಾಗಿ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಹೋಗುವಂತೆ ಆಕೆಯು ಹೋಗಿಬಿಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:7
4 ತಿಳಿವುಗಳ ಹೋಲಿಕೆ  

ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿರಿ, ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಇಷ್ಟರಲ್ಲೇ ಅಪಹರಿಸಿದರು; ನಮ್ಮ ಯತ್ನವೇನೂ ಸಾಗುವದಿಲ್ಲ. ನಮ್ಮ ಹೊಲತೋಟಗಳು ಪರಾಧೀನವಾದವು ಎಂದು ಗುಣುಗುಟ್ಟಿದರು.


ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರಕೊಂಡು ಬಂದು ಕದದ ಹತ್ತಿರ ಅಥವಾ ಬಾಗಲಿನ ನಿಲುವುಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ಸಲಾಕೆಯಿಂದ ಚುಚ್ಚಬೇಕು. ಆ ಹೊತ್ತಿನಿಂದ ಇವನು ಶಾಶ್ವತವಾಗಿ ಅವನಿಗೆ ದಾಸನಾಗಿರಬೇಕು.


ಅವಳನ್ನು ಗೊತ್ತು ಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಬಿಡಿಸಿಕೊಳ್ಳಲಿಕ್ಕೆ ಅವಳಿಗೆ ಅನುಕೂಲಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದದರಿಂದ ಅನ್ಯಜನರಿಗೆ ಅವಳನ್ನು ಮಾರುವದಕ್ಕೆ ಅವನಿಗೆ ಅಧಿಕಾರವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು