Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:8 - ಕನ್ನಡ ಸತ್ಯವೇದವು J.V. (BSI)

8 ಅವಳನ್ನು ಗೊತ್ತು ಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಬಿಡಿಸಿಕೊಳ್ಳಲಿಕ್ಕೆ ಅವಳಿಗೆ ಅನುಕೂಲಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದದರಿಂದ ಅನ್ಯಜನರಿಗೆ ಅವಳನ್ನು ಮಾರುವದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವಳನ್ನು ತನಗಾಗಿ ಗೊತ್ತುಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಅವನಿಂದ ಬಿಡಿಸಿಕೊಳ್ಳಲು ಅವಳಿಗೆ ಅವಕಾಶಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದುದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವಳನ್ನು ನಿಶ್ಚಯಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ, ಆಗ ಅವಳು ಬಿಡುಗಡೆಯಾಗುವಂತೆ ಮಾಡಲಿ. ಅವನು ಅವಳನ್ನು ವಂಚಿಸಿದ್ದರಿಂದ ಯೆಹೂದ್ಯರಲ್ಲದವರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:8
13 ತಿಳಿವುಗಳ ಹೋಲಿಕೆ  

ಆಗ ಅವರು ಅವನಿಗೆ - ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುತ್ತೀ; ನಿನ್ನ ಬಂಧುಗಳಲ್ಲಿಯೂ ನಮ್ಮ ಎಲ್ಲಾ ಜನರಲ್ಲಿಯೂ ನಿನಗೆ ಹೆಣ್ಣು ಸಿಕ್ಕುವದಿಲ್ಲವೋ ಎಂದು ಕೇಳಲು ಅವನು - ನನಗೋಸ್ಕರ ಆಕೆಯನ್ನೇ ತೆಗೆದುಕೊಳ್ಳಬೇಕು; ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ ಅಂದನು.


ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.


ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.


ಅದಕ್ಕೆ ಮೋಶೆ - ನಾನು ನಿನ್ನ ಬಳಿಯಿಂದ ಹೊರಟಾಗ ಫರೋಹನಾದ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ಹುಳಗಳ ಬಾಧೆಯು ನಾಳೆಯಿಂದ ಇರಬಾರದೆಂಬದಾಗಿ ಯೆಹೋವನಿಗೆ ಪ್ರಾರ್ಥನೆ ಮಾಡುವೆನು. ಆದರೆ ಯೆಹೋವನಿಗೆ ಯಜ್ಞಮಾಡಲಿಕ್ಕೆ ನೀನು ಜನರಿಗೆ ಅಪ್ಪಣೆ ಕೊಡದೆ ಇನ್ನು ಮುಂದೆ ವಂಚನೆಮಾಡಬಾರದು ಅಂದನು.


ಕಾನಾನ್ಯರ ಹೆಣ್ಣುಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ತಿಳುಕೊಂಡು


ನನ್ನ ಸಹೋದರರಾದರೋ ತೊರೆಯ ಹಾಗೂ ಪ್ರವಾಹವು ಹಾದುಹೋಗಿ ಬತ್ತಿದ ಹಳ್ಳದ ಹಾಗೂ ದ್ರೋಹಿಗಳಾಗಿದ್ದಾರೆ.


ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹುವ್ಯಸನವೂ ಕೋಪವೂ ಉಂಟಾಗಿ ಅವನು - ದಾವೀದನು ಹತ್ತು ಸಾವಿರ ಗಟ್ಟಳೆಯಾಗಿ ಕೊಂದನೆಂದೂ ನಾನು ಸಾವಿರಗಟ್ಟಳೆಯಾಗಿ ಕೊಂದೆನೆಂದೂ ಹಾಡುತ್ತಾರಲ್ಲಾ! ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾದ ಹಾಗಾಯಿತು ಅಂದುಕೊಂಡು


ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇವಿುಸಿಕೊಡು ಎಂಬ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಲು ಆತನು ಅವನಿಗೆ -


ಯಾವನಾದರೂ ತನ್ನ ಮಗಳನ್ನು ದಾಸಿಯಾಗುವದಕ್ಕೆ ಮಾರಿದರೆ ಪುರುಷರಾದ ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಕೂಡದು.


ಅವನು ತನ್ನ ಮಗನಿಗೆ ಅವಳನ್ನು ಗೊತ್ತುಮಾಡಿಕೊಂಡರೆ ಸೊಸೆಯಂತೆ ಭಾವಿಸಬೇಕು.


ಅವರು ದ್ರೋಹಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು