Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:1 - ಕನ್ನಡ ಸತ್ಯವೇದವು J.V. (BSI)

1 ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯಿದರೆ ಇಲ್ಲವೆ ಮಾರಿದರೆ ಅವನು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು, ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಬದಲಾಗಿ ನಾಲ್ಕು ಕುರಿಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ, ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದು ಅದನ್ನು ಕೊಯಿದರೆ ಅಥವಾ ಮಾರಿದರೆ, ಅವನು ತಾನು ಕದ್ದ ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನೂ ಅಥವಾ ತಾನು ಕದ್ದ ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದು ಕೊಯ್ದರೆ, ಇಲ್ಲವೆ ಅದನ್ನು ಮಾರಿದರೆ, ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ, ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:1
9 ತಿಳಿವುಗಳ ಹೋಲಿಕೆ  

ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.


ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು ಅಂದನು.


ಅವನ ತಪ್ಪು ಬೈಲಾದರೆ ಅವನು ಏಳರಷ್ಟು ಕೊಡಬೇಕಾಗುವದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ತೆತ್ತೇ ತೀರಬೇಕು.


ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.


ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಲ್ಲವೆ.


ಆದರೆ ಅದಕ್ಕೆ ಮುಂಚಿತವಾಗಿ ಆ ಎತ್ತು ಹಾಯುವಂಥದೇ ಎಂದು ತಿಳಿದಿದ್ದಾಗ್ಯೂ ಅದರ ಒಡೆಯನು ಅದನ್ನು ಕಟ್ಟಿಹಾಕದೆ ಹೋದದ್ದಾದರೆ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಕೊಡಬೇಕು; ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.


ಅಂದರೆ ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಜೀವಾಧಾರವಾದ ವಿಧಿಗಳನ್ನು ಅನುಸರಿಸಿ ಸಕಲ ದುಷ್ಕರ್ಮಗಳಿಗೂ ದೂರನಾಗಿರುವ ಪಕ್ಷದಲ್ಲಿ ಸಾಯನು, ಬಾಳೇಬಾಳುವನು.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು