ವಿಮೋಚನಕಾಂಡ 22:10 - ಕನ್ನಡ ಸತ್ಯವೇದವು J.V. (BSI)10 ಒಬ್ಬನು ಕತ್ತೆಯನ್ನಾಗಲಿ ಎತ್ತನ್ನಾಗಲಿ ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವದಕ್ಕೆ ಮತ್ತೊಬ್ಬನ ವಶಕ್ಕೆ ಕೊಟ್ಟ ಮೇಲೆ ಅದು ಸತ್ತರೆ ಇಲ್ಲವೆ ಊನವಾದರೆ ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾಗಲಿ, ಎತ್ತನ್ನಾಗಲಿ, ಕುರಿಯನ್ನಾಗಲಿ ಬೇರೆ ಯಾವ ಪಶುವನ್ನಾಗಲಿ ಕಾಪಾಡುವುದಕ್ಕೆ ಕೊಟ್ಟಿದ್ದು, ಅದು ಸತ್ತರೆ ಇಲ್ಲವೆ ಗಾಯಗೊಂಡರೆ ಇಲ್ಲವೆ ಯಾರೂ ತಿಳಿಯದಂತೆ ಕಳ್ಳತನವಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಒಬ್ಬನು ಮತ್ತೊಬ್ಬನ ಕತ್ತೆಯನ್ನಾಗಲಿ ಎತ್ತನ್ನಾಗಲಿ ಕುರಿಯನ್ನಾಗಲಿ, ಬೇರೆ ಯಾವ ಪ್ರಾಣಿಯನ್ನೇ ಆಗಲಿ ತನ್ನ ಬಳಿಯಿಂದ ಸುರಕ್ಷಿತವಾಗಿಟ್ಟುಕೊಳ್ಳಲು ಒಪ್ಪಿಕೊಂಡ ಮೇಲೆ ಅದು ಸತ್ತರೆ, ಗಾಯಗೊಂಡರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಸ್ವಲ್ಪಕಾಲದವರೆಗೆ ತನ್ನ ಪಶುವನ್ನು ಪೋಷಿಸಬೇಕೆಂದು ತನ್ನ ನೆರೆಯವನನ್ನು ಕೇಳಿಕೊಳ್ಳಬಹುದು. ಈ ಪಶುವು ಕತ್ತೆಯಾಗಿರಬಹುದು, ಎತ್ತಾಗಿರಬಹುದು, ಕುರಿಯಾಗಿರಬಹುದು ಅಥವಾ ಯಾವುದೇ ಪಶುವಾಗಿರಬಹುದು. ಆದರೆ ಅದು ಸತ್ತರೆ ಅಥವಾ ಅದಕ್ಕೆ ಪೆಟ್ಟಾದರೆ ಅಥವಾ ಕಳುವಾದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶುವನ್ನಾದರೂ ಕಾಯುವುದಕ್ಕೆ ಕೊಟ್ಟಾಗ, ಅದು ಸತ್ತರೆ, ಇಲ್ಲವೆ ಊನವಾದರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ, ಅಧ್ಯಾಯವನ್ನು ನೋಡಿ |
ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲಿಯೂ, ಅದು ಎತ್ತು ಕತ್ತೆ ಕುರಿ ಬಟ್ಟೆಗಳ ವಿಷಯವಾದರೂ ಸರಿಯೇ ಕಳಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ [ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು] ಇದು ತನ್ನದೆಂದು ಹೇಳುವ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುವನೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.